AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accident ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರತ್ಯೇಕ ಅಪಘಾತ.. ಪಾರ್ಟಿ ಮುಗಿಸಿ ಸ್ನೇಹಿತನ ಹೊಸ ಬೈಕ್​ ಏರಿದ್ದವ ಅಪಘಾತದಲ್ಲಿ ಸಾವು

ಬೆಂಗಳೂರಿನ ರಿಚ್ಮಂಡ್‌ ಸರ್ಕಲ್ ಬಳಿ, ನೆಲಮಂಗಲ ತಾಲೂಕಿನ ದೊಡ್ಡೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಮತ್ತು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳು ಗ್ರಾಮದ ಬಳಿ ರಾ.ಹೆ 4 ಸೇರಿ ಮೂರು ಕಡೆ ಪ್ರತ್ಯೇಕ ಅಪಘಾತಗಳು ಸಂಭವಿಸಿವೆ.

Road Accident ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರತ್ಯೇಕ ಅಪಘಾತ.. ಪಾರ್ಟಿ ಮುಗಿಸಿ ಸ್ನೇಹಿತನ ಹೊಸ ಬೈಕ್​ ಏರಿದ್ದವ ಅಪಘಾತದಲ್ಲಿ ಸಾವು
ಸಿಸಿ ಕ್ಯಾಮರಾ ಕಂಬಕ್ಕೆ ರಾಯಲ್ ಎನ್ಫೀಲ್ಡ್ ಬೈಕ್ ಡಿಕ್ಕಿ ಹೊಡೆದು ಸವಾರ ಸಾವು
ಆಯೇಷಾ ಬಾನು
|

Updated on: Mar 18, 2021 | 8:17 AM

Share

ಬೆಂಗಳೂರು: ಸಿಸಿ ಕ್ಯಾಮರಾ ಕಂಬಕ್ಕೆ ರಾಯಲ್ ಎನ್ಫೀಲ್ಡ್ ಬೈಕ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ರಿಚ್ಮಂಡ್‌ ಸರ್ಕಲ್ ಬಳಿ ತಡರಾತ್ರಿ ನಡೆದಿದೆ. ಹರ್ಷ(24) ಮೃತ ದುರ್ದೈವಿ. ಎಸ್.ಆರ್.ನಗರ ನಿವಾಸಿ ಹರ್ಷ, ತಡ ರಾತ್ರಿ ಪಾರ್ಟಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ವಿಲ್ಸನ್ ಗಾರ್ಡನ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹರ್ಷ ರಾತ್ರಿ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿ ತನ್ನ ಸ್ನೇಹಿತನ ಹೊಸ ರಾಯಲ್ ಎನ್ಫೀಲ್ಡ್ ಬೈಕ್ ತೆಗೆದುಕೊಂಡು ನಾಳೆ ಕೊಡವುದಾಗಿ ಹೇಳಿ ಮನೆಗೆ ಹೊರಟ್ಟಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಸಿಸಿ ಕ್ಯಾಮರಾ ಕಂಬಕ್ಕೆ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಭೀಕರವಾಗಿ ಕೊನೆಯುಸಿರೆಳೆದಿದ್ದಾನೆ. ಯುವಕನ ಮೃತದೇಹ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾಗೆ ರವಾನಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ

Nelamangala Accident

ನೆಲಮಂಗಲ ತಾಲೂಕಿನ ದೊಡ್ಡೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದೊಡ್ಡೇರಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಲಾರಿ, ಕಾರಿನ ನಡುವೆ ಡಿಕ್ಕಿಯಾಗಿದ್ದು ಅದೃಷ್ಟವಶಾತ್ ಅನಾಹುತ ತಪ್ಪಿದೆ. ಅಪಘಾತದಲ್ಲಿ ನಿಯಂತ್ರಣ ತಪ್ಪಿ ಲಾರಿ ರಸ್ತೆಯಲ್ಲೆ ಉರುಳಿ ಬಿದ್ದಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್‌ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು ಇದೇ ರೀತಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳು ಗ್ರಾಮದ ಬಳಿ ರಾ.ಹೆ 4ರಲ್ಲಿ ಲಾರಿ ಮತ್ತು ಇನೋವಾ ಕಾರು ನಡುವೆ ಡಿಕ್ಕಿ ಸಂಭವಿಸಿ ಇನೋವಾ ಕಾರ್​ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಹಾಗೂ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ದಾವಣಗೆರೆ ಮೂಲದ ರಂಗಸ್ವಾಮಿ(45) ಮೃತ ದುರ್ದೈವಿ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Chitradurga Accident

ಹಿರಿಯೂರು ತಾಲೂಕಿನ ಗುಯಿಲಾಳು ಗ್ರಾಮದ ಬಳಿ ರಾ.ಹೆ 4ರಲ್ಲಿ ಅಪಘಾತ ನಡೆದಿದೆ

ಇದನ್ನೂ ಓದಿ: ಪ್ರತ್ಯೇಕ ಘಟನೆಯಲ್ಲಿ ನಾಲ್ವರ ದುರ್ಮರಣ: ಚಿತ್ರದುರ್ಗ, ವಿಜಯಪುರ, ಹಾಸನದಲ್ಲಿ ಅಪಘಾತ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ