ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು: ಐವರಿಗೆ ಗಂಭೀರ ಗಾಯ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದಿರುತಳ ಗ್ರಾಮದ ಬಳಿ ಭೀಕರವಾದ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಟ್ಟು 5 ಜನರಿಗೆ ಗಂಭೀರ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು: ಐವರಿಗೆ ಗಂಭೀರ ಗಾಯ
ಪ್ರಪಾತಕ್ಕೆ ಉರುಳಿದ ಕಾರು
Edited By:

Updated on: Dec 05, 2020 | 3:17 PM

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದಿರುತಳ ಗ್ರಾಮದ ಬಳಿ ಭೀಕರವಾದ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಟ್ಟು 5 ಜನರಲ್ಲಿ ರಾಕೇಶ್, ಸಂತೋಷ್, ಶಿವು, ಅಭಿಜಿತ್​ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಆಲೇಶ್​ ಎಂಬಾತನ ಕಾಲು ಮುರಿದಿದೆ.

ಈ ಪ್ರಕರಣ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ತರೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿದ್ದು, ಸದ್ಯ ಶಿವಮೊಗ್ಗ ಆಸ್ಪತ್ರೆಗೆ ಐವರನ್ನು ದಾಖಲಿಸಲಾಗಿದೆ.

ಮರಕ್ಕೆ ಕಾರು ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ