ಪತಿ ಜತೆ ಬೈಕ್ನಲ್ಲಿ ಏರ್‌ಪೋರ್ಟ್‌ಗೆ ಕೆಲಸಕ್ಕೆ ಹೋಗ್ತಿದ್ದ ಮಹಿಳೆ; ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು
ಶಕುಂತಲಾ ತನ್ನ ಪತಿ ಜತೆ ಏರ್‌ಪೋರ್ಟ್‌ಗೆ ಕೆಲಸಕ್ಕೆ ಹೋಗ್ತಿದ್ದಾಗ ಖಾಸಗಿ ವಾಹನ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಶಕುಂತಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪತಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ದೇವನಹಳ್ಳಿ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ. ಶಕುಂತಲಾ(40) ಮೃತ ದುರ್ದೈವಿ.
ಶಕುಂತಲಾ ತನ್ನ ಪತಿ ಜತೆ ಏರ್‌ಪೋರ್ಟ್‌ಗೆ ಕೆಲಸಕ್ಕೆ ಹೋಗ್ತಿದ್ದಾಗ ಖಾಸಗಿ ವಾಹನ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಶಕುಂತಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪತಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯಿಂದ ಅಪಘಾತವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಏರ್‌ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಳೆದೊಂದು ವರ್ಷದಲ್ಲಿ ಕೊರೊನಾಕ್ಕಿಂತ ರಸ್ತೆ ಅಪಘಾತಕ್ಕೆ ಬಲಿಯಾದವರೇ ಹೆಚ್ಚು: ನಿತಿನ್ ಗಡ್ಕರಿ