ಹುಬ್ಬಳ್ಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನಾಳೆ (ಗುರುವಾರ) ಹುಬ್ಬಳ್ಳಿಗೆ ಆಗಮಿಸಲಿದ್ದು ನಗರದ ರೇಲ್ವೇ ಮೈದಾನದಲ್ಲಿ (railway grounds) ಅವರು 26 ನೇ ಯುವಜನೋತ್ಸವವನ್ನು (Youth Fest) ಉದ್ಘಾಟಿಸಿ ಮಾತಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನೆಹರೂ ಮೈದಾನದವರೆಗಿನ ರಸ್ತೆ ಮತ್ತು ಬ್ರಿಜ್ ಗಳಿಗೆ ಬಗೆಬಗೆಯ ಬಣ್ಣಗಳನ್ನು ಬಳಿದು ಅಲಂಕಾರ ಮಾಡಲಾಗಿದೆ. ರಸ್ತೆಯುದ್ದಕ್ಕೂ ಕೇಸರಿ ಬಣ್ಣದ ಬಟ್ಟೆಗಳನ್ನು ಕಟ್ಟಿರುವುದನ್ನು ನೋಡಬಹುದು. ರಸ್ತೆಯ ಇಕ್ಕೆಲಗಳಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಚಿತ್ರಗಳನ್ನೊಳಗೊಂಡ ಬ್ಯಾನರ್ಗಳು ರಾರಾಜಿಸುತ್ತಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ