ಡ್ರಾಪ್ ಕೊಡೋ ನೆಪದಲ್ಲಿ ಸುಲಿಗೆ: ಟಿಕ್ಕಿ ಬಳಿ ಹಣ, ಚಿನ್ನ ಕಸಿದು ದರೋಡೆಕೋರರು ಎಸ್ಕೇಪ್

ಮೈಸೂರು: ಬೆಂಗಳೂರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಟೆಕ್ಕಿಯ ಬಳಿ ಸುಲಿಗೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಟೆಕ್ಕಿ ಮಧುವಿಕಾಸ್​ಗೆ ಚಾಕು ತೋರಿಸಿ ಬೆದರಿಕೆ ಹಾಕಿ ಚಿನ್ನ ಕಸಿದುಕೊಂಡಿದ್ದಾರೆ. ನಂತರ ಬಲವಂತವಾಗಿ ಎಟಿಎಂನಿಂದ 40 ಸಾವಿರ ಹಣ ಡ್ರಾ ಮಾಡಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಡ್ರಾಪ್ ಕೊಡುವ ನೆಪದಲ್ಲಿ ದರೋಡೆ: ಮೈಸೂರಿನ ಗೌರಿಶಂಕರ ನಗರದ ನಿವಾಸಿ ಮಧುವಿಕಾಸ್, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿಗೆ ತೆರಳಲು ನಗರದ ಗ್ರಾಮಾಂತರ ಬಸ್ […]

ಡ್ರಾಪ್ ಕೊಡೋ ನೆಪದಲ್ಲಿ ಸುಲಿಗೆ: ಟಿಕ್ಕಿ ಬಳಿ ಹಣ, ಚಿನ್ನ ಕಸಿದು ದರೋಡೆಕೋರರು ಎಸ್ಕೇಪ್
Follow us
ಸಾಧು ಶ್ರೀನಾಥ್​
|

Updated on: Jan 14, 2020 | 9:32 AM

ಮೈಸೂರು: ಬೆಂಗಳೂರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಟೆಕ್ಕಿಯ ಬಳಿ ಸುಲಿಗೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಟೆಕ್ಕಿ ಮಧುವಿಕಾಸ್​ಗೆ ಚಾಕು ತೋರಿಸಿ ಬೆದರಿಕೆ ಹಾಕಿ ಚಿನ್ನ ಕಸಿದುಕೊಂಡಿದ್ದಾರೆ. ನಂತರ ಬಲವಂತವಾಗಿ ಎಟಿಎಂನಿಂದ 40 ಸಾವಿರ ಹಣ ಡ್ರಾ ಮಾಡಿಸಿಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ.

ಡ್ರಾಪ್ ಕೊಡುವ ನೆಪದಲ್ಲಿ ದರೋಡೆ: ಮೈಸೂರಿನ ಗೌರಿಶಂಕರ ನಗರದ ನಿವಾಸಿ ಮಧುವಿಕಾಸ್, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿಗೆ ತೆರಳಲು ನಗರದ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಶಿಫ್ಟ್ ಡಿಸೈರ್ ಕಾರಿನಲ್ಲಿ ಬಂದ ಮೂವರು ಬೆಂಗಳೂರಿಗೆ ಡ್ರಾಪ್ ಕೊಡುವ ಆಮಿಷ ತೋರಿಸಿದ್ದಾರೆ.

ಚಾಕು ತೋರಿಸಿ ಬೆದರಿಕೆ: ಬೇಗ ಬೆಂಗಳೂರಿಗೆ ತಲುಪುವ ಉದ್ದೇಶದಿಂದ ಮಧುವಿಕಾಸ್ ಕಾರು ಹತ್ತಿದ್ದಾರೆ. ಕೊಲಂಬಿಯಾ ಏಷಿಯಾ ಬಳಿ ರಿಂಗ್ ರಸ್ತೆ ಮೂಲಕ ಕೆ.ಆರ್.ಎಸ್ ರಸ್ತೆ ಕಡೆಗೆ ತಿರುಗಿಸಿದ ದುಷ್ಕರ್ಮಿಗಳು, ಅಲ್ಲೇ ಕಾರು ನಿಲ್ಲಿಸಿ ಚಾಕು ತೋರಿಸಿ ಉಂಗುರ ಮತ್ತು ಸರವನ್ನು ಕಸಿದುಕೊಂಡಿದ್ದಾರೆ. ನಂತರ ಒಂಟಿಕೊಪ್ಪಲಿನ HDFC ಬ್ಯಾಂಕ್​ಗೆ ಸೇರಿದ ಎಟಿಎಂನಲ್ಲಿ 20 ಸಾವಿರ ಹಣ ಡ್ರಾ ಮಾಡಿ, ಬಳಿಕ ಅಶೋಕ‌ ರಸ್ತೆಯಲ್ಲಿರುವ ಕೊಟಾಕ್ ಮಹೀಂದ್ರ ಎಟಿಎಂನಲ್ಲಿ 20 ಸಾವಿರ ಹಣ ಡ್ರಾ ಮಾಡಿಸಿ‌ಕೊಂಡು ಪರಾರಿಯಾಗಿದ್ದಾರೆ. ಈ ಸಂಬಂಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ