AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Movie: ರಾಬರ್ಟ್​ ಸ್ವಾಗತಕ್ಕೆ ಒಂದೇ ಥಿಯೇಟರ್​ನಲ್ಲಿ ದರ್ಶನ್​ 13 ಕಟೌಟ್​!

ರಾಬರ್ಟ್​ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಅಷ್ಟೇ ಅಲ್ಲ, ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸೋಕೆ ರೆಡಿ ಆಗಿದ್ದಾರೆ. ಬೆಂಗಳೂರಿನ ಹಲವು ಚಿತ್ರಮಂದರಿಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಸಿನಿಮಾ ಪ್ರದರ್ಶನ ಕಾಣಲಿದೆ.

Roberrt Movie: ರಾಬರ್ಟ್​ ಸ್ವಾಗತಕ್ಕೆ ಒಂದೇ ಥಿಯೇಟರ್​ನಲ್ಲಿ ದರ್ಶನ್​ 13 ಕಟೌಟ್​!
ಜೆಪಿ ನಗರದಲ್ಲಿ ದರ್ಶನ್​ ಕಟೌಟ್ಸ್​
ರಾಜೇಶ್ ದುಗ್ಗುಮನೆ
|

Updated on:Mar 10, 2021 | 7:06 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ಶಿವರಾತ್ರಿ ಪ್ರಯುಕ್ತ ಗುರುವಾರ (ಮಾ.11) ರಿಲೀಸ್​ ಆಗುತ್ತಿದೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಪ್ರದರ್ಶನ ಕಾಣಲಿದೆ. ಈ ಮಧ್ಯೆ, ಬೆಂಗಳೂರಿನ ಥಿಯೇಟರ್​ ಒಂದರಲ್ಲಿ ಅಭಿಮಾನಿಗಳು ದರ್ಶನ್​ ಅವರ 13 ಕಟೌಟ್ ಹಾಕಿದ್ದಾರೆ.

ರಾಬರ್ಟ್​ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಅಷ್ಟೇ ಅಲ್ಲ, ಅಭಿಮಾನಿಗಳು ಇದನ್ನು ಹಬ್ಬದಂತೆ ಆಚರಿಸೋಕೆ ರೆಡಿ ಆಗಿದ್ದಾರೆ. ಬೆಂಗಳೂರಿನ ಹಲವು ಚಿತ್ರಮಂದರಿಗಳಲ್ಲಿ ಮುಂಜಾನೆ 6 ಗಂಟೆಗೆ ರಾಬರ್ಟ್​ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಇವುಗಳಲ್ಲಿ ಕೆಲವು ಶೋಗಳು ಈಗಾಗಲೇ ಸೋಲ್ಡ್​ಔಟ್​ ಆಗಿದೆ.

ದರ್ಶನ್​ ಸಿನಿಮಾದ ಹೈಪ್ ಎಷ್ಟಿದೆ ಎಂಬುದನ್ನು ಅಭಿಮಾನಿಗಳು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಜೆಪಿ ನಗರದ ಸಿದ್ಧೇಶ್ವರ ಥಿಯೇಟರ್​​ನಲ್ಲಿ ಫ್ಯಾನ್ಸ್ ಬರೋಬ್ಬರಿ 13 ಕಟೌಟ್ ಹಾಕಿದ್ದಾರೆ. ಒಂದೊಂದು ಕಟೌಟ್​ಗಳು ಒಂದೊಂದು ರೀತಿ ಇದೆ. ದರ್ಶನ ಅಭಿನಯಿಸಿರುವ ಸಿನಿಮಾಗಳ ಪಾತ್ರಗಳ ಗೆಟಪ್​ನಲ್ಲಿ ಕಟೌಟ್ಸ್ ಸಿದ್ಧಗೊಂಡಿದೆ.

ಗುರುವಾರ ಶಿವರಾತ್ರಿ ಪ್ರಯುಕ್ತ ರಜೆ ಇದೆ. ಹೀಗಾಗಿ ದೊಡ್ಡ ಸಂಖ್ಯೆಯಲ್ಲೇ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಾರೆ. ಶುಕ್ರವಾರ ಚಿತ್ರರಂಗದ ಪಾಲಿಗೆ ವಿಶೇಷ ದಿನ. ಹೀಗಾಗಿ, ಅಂದು ಕೂಡ ಪ್ರೇಕ್ಷಕರು ಥಿಯೇಟರ್​ಗೆ ಬರುತ್ತಾರೆ. ಇನ್ನು, ಶನಿವಾರ-ಭಾನುವಾರ ವೀಕೆಂಡ್​ ಆದ್ದರಿಂದ ಅಂದು ಕೂಡ ದರ್ಶನ್​ ಸಿನಿಮಾ ಬಾಕ್ಸ್​ ಆಫೀಸ್​ ಧೂಳೆಬ್ಬಿಸುವ ಲಕ್ಷಣ ಇದೆ.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ದರ್ಶನ್​ಗೆ ಸ್ವಿಮ್ಮಿಂಗ್​ ಬರಲ್ಲ; ಆದರೂ ರಾಬರ್ಟ್​ಗಾಗಿ ದೊಡ್ಡ ರಿಸ್ಕ್​ ತೆಗೆದುಕೊಂಡ ‘ಚಾಲೆಂಜಿಂಗ್​ ಸ್ಟಾರ್​’!

Published On - 4:59 pm, Wed, 10 March 21

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ