ರಾಕ್‌ಲೈನ್ ವೆಂಕಟೇಶ್‌ಗೆ ಕೊರೊನಾ ಇಲ್ಲವಂತೆ..

  • TV9 Web Team
  • Published On - 11:15 AM, 8 Jul 2020
ರಾಕ್‌ಲೈನ್ ವೆಂಕಟೇಶ್‌ಗೆ ಕೊರೊನಾ ಇಲ್ಲವಂತೆ..

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾಗೆ ಕೊರೊನಾ ಸೋಂಕು ಇರುವುದು ದೃಢಪಡುತ್ತಿದ್ದಂತೆ ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ಗೆ ಕೊರೊನಾ ಇದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅಪ್ಪನಿಗೆ ಸೋಂಕು ಇಲ್ಲ ಎಂದು ರಾಕ್‌ಲೈನ್ ವೆಂಕಟೇಶ್ ಪುತ್ರ ಯತೀಶ್ ಸ್ಪಷ್ಟಪಡಿಸಿದ್ದಾರೆ.

ನಮ್ಮ ತಾಯಿಗೆ ಮಾತ್ರ ಕೊರೊನಾ ಸೋಂಕು ಇತ್ತು. ಹೀಗಾಗಿ ನಮ್ಮ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಮ್ಮ ತಂದೆ ಹೋಮ್ ಕ್ವಾರಂಟೈನ್‌ನಲ್ಲಿ ಇದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಟಿವಿ9ಗೆ ರಾಕ್‌ಲೈನ್ ವೆಂಕಟೇಶ್ ಪುತ್ರ ಯತೀಶ್ ತಿಳಿಸಿದ್ರು.