
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಕೊರೊನಾ ಕಂಪನ ದಿನೇ ದಿನೇ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯ KR ಆಸ್ಪತ್ರೆಗೆ ಭೇಟಿ ನೀಡಿ ಕೊವಿಡ್ಗಾಗಿ ಮೀಸಲಿರುವ ಹಾಸಿಗೆಗಳನ್ನು ಹೆಚ್ಚಿಸಲು ಸೂಚನೆ ನೀಡಿದ್ದಾರೆ.
PPE ಕಿಟ್ ಧರಿಸಿ ರೋಹಿಣಿ ಸಿಂಧೂರಿ ಪರಿಶೀಲನೆ:
ಇನ್ನು ತಜ್ಞ ವೈದ್ಯರು, ನರ್ಸ್ಗಳು, ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಖ್ಯೆ, ಹಾಸಿಗೆಗಳ ಸಾಮರ್ಥ್ಯ, ಆಕ್ಸಿಜನ್ ಸಿಲಿಂಡರ್ ಹಾಗೂ ವೆಂಟಿಲೇಟರ್‌ಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. KR ಆಸ್ಪತ್ರೆಯ ಕೊವಿಡ್ ಚಿಕಿತ್ಸಾ ವಿಭಾಗಕ್ಕೆ ಪಿಪಿಇ ಕಿಟ್ ಧರಿಸಿ ರೋಹಿಣಿ ಸಿಂಧೂರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಆಸ್ಪತ್ರೆಯಲ್ಲಿ 178 ಬೆಡ್ಗಳಿವೆ ಎಂದು ತಿಳಿದುಕೊಂಡರು.
ಇನ್ನೂ 200 ಬೆಡ್ಗಳನ್ನು ಕೊವಿಡ್ ಚಿಕಿತ್ಸೆಗೆ ಹೆಚ್ಚಿಸುವಂತೆ ಹಾಗೂ ಟ್ರಾಮಾ ಕೇರ್ ಸೆಂಟರ್ನಲ್ಲೂ ಕೊವಿಡ್ ಚಿಕಿತ್ಸೆಗೆ ಆಕ್ಸಿಜನ್ ಇರುವ ಬೆಡ್‌ಗಳ ವ್ಯವಸ್ಥೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ. ವೈದ್ಯಕೀಯ ಸ್ನಾತಕೋತ್ತರ ಪದವಿಯ ಕೊನೆಯ ವರ್ಷದ 154 ವಿದ್ಯಾರ್ಥಿಗಳನ್ನು ಕೊವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಸೂಕ್ತ ತರಬೇತಿ ನೀಡಲು ಸಲಹೆ ನೀಡಿದ್ದಾರೆ.
Published On - 3:56 pm, Tue, 6 October 20