ನೆಲಮಂಗಲದ ಉದ್ಭವ ಗಣೇಶ ಜಾತ್ರೆಯಲ್ಲಿ ಪುಂಡರ, ಮಂಗಳಮುಖಿಯರ ಹಾವಳಿ; ರೋಸಿಹೋದ ವ್ಯಾಪಾರಿಗಳು

400 ವರ್ಷದಷ್ಟು ಹಳೆಯದಾದ ಐತಿಹಾಸಿಕ ಉದ್ಭವ ಗಣೇಶ ಜಾತ್ರೆಯಲ್ಲಿ ಪುಂಡರ ಮತ್ತು ಮಂಗಳಮುಖಿಯರ ಹಾವಳಿಯಿಂದ ವ್ಯಾಪಾರಿಗಳು ರೋಸಿಹೋಗಿದ್ದಾರೆ. ಹೌದು ಪುಂಡರು ಮತ್ತು ಮಂಗಳಮುಖಿಯರು ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ಕೊಡದ ವ್ಯಾಪಾರಿಗಳ ಜೊತೆ ಗಲಾಟೆ ಮಾಡಿದ್ದಾರೆ.

ನೆಲಮಂಗಲದ ಉದ್ಭವ ಗಣೇಶ ಜಾತ್ರೆಯಲ್ಲಿ ಪುಂಡರ, ಮಂಗಳಮುಖಿಯರ ಹಾವಳಿ; ರೋಸಿಹೋದ ವ್ಯಾಪಾರಿಗಳು
ಮಂಗಳಮುಖಿಯರ, ಪುಂಡರ ಹಾವಳಿ
Follow us
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ

Updated on:Dec 27, 2023 | 7:33 AM

ನೆಲಮಂಗಲ, ಡಿಸೆಂಬರ್​ 27: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ (Nelamangal) ಪಟ್ಟಣದಲ್ಲಿ ನಡೆಯುವ ಐತಿಹಾಸಿಕ ಉದ್ಭವ ಗಣೇಶ (Lord Ganesh) ಜಾತ್ರೆಯಲ್ಲಿ ಪುಂಡರ ಹಾವಳಿಯಿಂದ ಅಂಗಡಿಕಾರರು ರೋಸಿ ಹೋಗಿದ್ದಾರೆ. ​​ಹೌದು ಪುಂಡರು ರೌಡಿಶೀಟರ್ ರಂಗ ಅಲಿಯಾಸ್​​​ ಗಣೇಶನ ಗುಡಿ ರಂಗ ಹೆಸರಿನಲ್ಲಿ ಜಾತ್ರೆಯಲ್ಲಿ ವ್ಯಾಪಾರಿಗಳ ಬಳಿ ಹಣ ವಸೂಲಿ ಮಾಡುತ್ತಿದ್ದರು. ಈ ವಿಚಾರ ತಿಳಿದ ನೆಲಮಂಗಲ ಟೌನ್ ಠಾಣೆ ಪೊಲೀಸರು ಸ್ಥಳೀಯರ ನೆರವಿನಿಂದ ಆರೋಪಿಗಳನ್ನು ವಶಕ್ಕೆ ಪಡೆದರು. ನೆಲಮಂಗಲ ಟೌನ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುಂಡರು ಜಾತ್ರೆಯಲ್ಲಿ ಯುವತಿಯರು ಕಂಡರೇ ಪೀಪಿ ಊದಿ ಕರ್ಕಶ ಶಬ್ದ ಮಾಡಿ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದರು. ಈ ರೀತಿ ಉಪಟಳ ನೀಡುತ್ತಾ ವಿಕೃತ ಆನಂದ ಪಡೆಯುತ್ತಿದ್ದರು. ಹೀಗಾಗಿ ಪುಂಡರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಇದನ್ನೂ ಓದಿ: ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ಮತ್ತೊಂದಡೆ ಮಂಗಳಮುಖಿಯರ ಉಪಟಳ ಮಿತಿಮೀರಿದೆ. ಹೌದು ಮಂಗಳಮುಖಿಯರು ಕೂಡ ವ್ಯಾಪಾರಿಗಳ ಬಳಿ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ಕೊಡದಿದ್ದರೇ ಬಟ್ಟೆ ಎತ್ತಿ ತೋರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಹಣ ಕೊಡದ ಅಂಗಡಿಯಲ್ಲಿನ ಸಾಮಾನುಗಳನ್ನ ಎತ್ತಿ ಬಿಸಾಡುತ್ತಿದ್ದರು. ಈ ಮಂಗಳಮುಖಿಯರ ಕೈಯಿಂದ ತಪ್ಪಿಸಿಕೊಳ್ಳಲು ವ್ಯಾಪಾರಿಗಳು ಸೆಣಸಾಡಿದರು.

ಇಷ್ಟೇ ಅಲ್ಲದೆ ಮಂಗಳಮುಖಿಯರು ಹಣ ಕೊಡದ ಅಂಗಡಿಗಳ ಮುಂದೆ ಗಲಾಟೆ ಮಾಡಿ, ಅಂಗಡಿ ಮಾಲಿಕರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಬರುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:18 am, Wed, 27 December 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?