AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ; ಜೀವ ಕಾಪಾಡಿದ ಆರ್​ಪಿಎಫ್​ ಕಾನ್​ಸ್ಟೇಬಲ್​

ವಿಡಿಯೋ ಇದೀಗ ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಡಮಾಡದೇ ಬೇಗ ಬಂದು ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ಆರ್​ಪಿಎಫ್​ ಅಧಿಕಾರಿಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ; ಜೀವ ಕಾಪಾಡಿದ ಆರ್​ಪಿಎಫ್​ ಕಾನ್​ಸ್ಟೇಬಲ್​
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋದ ಪ್ರಯಾಣಿಕ
TV9 Web
| Edited By: |

Updated on: Jul 01, 2021 | 11:45 AM

Share

ನಿಲ್ದಾಣಕ್ಕೆ ಈಗತಾನೆ ಬಂದು ರೈಲು ನಿಲ್ಲುವ ವೇಳೆಯಲ್ಲಿ ಅವಸರ ಮಾಡಿ ವ್ಯಕ್ತಿ ಇಳಿಯಲು ಮುಂದಾಗಿದ್ದಾರೆ. ರೈಲಿನಿಂದ ಇಳಿಯಲು ಪ್ರಯತ್ನಿಸುವ ವೇಳೆ ಪ್ರಯಾಣಿಕ ಕೆಳಗೆ ಬಿದ್ದಿದ್ದಾರೆ. ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕನ ಜೀವ ಉಳಿದಿದೆ. ಘಟನೆಯನ್ನು ಗಮನಿಸಿ ರೈಲು ಮೀಸಲು ಪಡೆ (ಆರ್​ಪಿಎಫ್​)  ಪ್ರಯಾಣಿಕನ ಜೀವ ಉಳಿಸಿದ್ದಾರೆ.

ಘಟನೆ ಎರಡು ದಿನಗಳ ಹಿಂದೆ ಮುಂಬೈನ ಬೊರಿವಾಲಿ ರೈಲು ನಿಲ್ದಾಣದಲ್ಲಿ ನಡೆದಿದೆ. ಈಗತಾನೆ ರೈಲು ನಿಲ್ದಾಣಕ್ಕೆ ಬಂದು ನಿಧಾನವಾಗಿ ಚಲಿಸಬೇಕು ಅನ್ನುವಷ್ಟರಲ್ಲಿಯೇ ಪ್ರಯಾಣಿಕ ಕೆಳಗೆ ಇಳಿಯಲು ಪ್ರಯತ್ನಿಸಿದ್ದಾರೆ. ರೈಲು ಮತ್ತು ಪ್ಲಾಟ್​ಫಾರಮ್​ನ ಅಂಚಿಗೆ ಕಾಲು ಸಿಲುಕಿ ಕೆಳಗೆ ಬಿದ್ದಿದ್ದಾರೆ. ಹತ್ತಿರದಲ್ಲಿದ್ದ ಆರ್​ಪಿಎಫ್​ ಸಿಬ್ಬಂದಿ ತಕ್ಕಷಣವೇ ಓಡಿ ಬಂದು ಪ್ರಯಾಣಿಕನ ಜೀವ ಉಳಿಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಡಿಯೋ ಇದೀಗ ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅವಸರವೇ ಅಪಘಾತಕ್ಕೆ ಕಾರಣ ಎಂಬಂತೆ ಯಾವಾಗಲೂ ವಾಹನದಲ್ಲಿ ಸಂಚರಿಸುವಾಗ ಅವಸರ ಮಾಡಬಾರದು ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅದೃಷ್ಟವಶಾತ್​ ಪ್ರಯಾಣಕನ ಜೀವ ಉಳಿಯಿತು ಎಂದು ಇನ್ನೋರ್ವರು ಹೇಳಿದ್ದಾರೆ. ತಡಮಾಡದೇ ಬೇಗ ಬಂದು ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ಆರ್​ಪಿಎಫ್​ ಅಧಿಕಾರಿಯನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ:

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ‘

ಮೆಟ್ರೋ ಮೇಲ್ಸೇತುವೆ, ರೈಲು ಕುಸಿತ; 23 ಮಂದಿ ಸಾವು.. 50ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು