AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ RR ನಗರ ಬೈಎಲೆಕ್ಷನ್, 304 ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ನಾಳೆ ನಡೆಯಲಿದೆ. ಹಾಗಾಗಿ, ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಒಟ್ಟು 141 ಲೊಕೇಷನ್​ಗಳಲ್ಲಿ 678 ಬೂತ್​ಗಳಿದ್ದು, 82 ಸೂಕ್ಷ್ಮ ಪ್ರದೇಶಗಳು, 596 ಸಾಮಾನ್ಯ ಪ್ರದೇಶಗಳನ್ನು ಗುರುತಿಸಲಾಗಿದ್ದು, ಭದ್ರತೆ ನಿಯೋಜಿಸಲಾಗಿದೆ. ಈ ನಿಟ್ಟಿನಲ್ಲಿ, ಕ್ಷೇತ್ರದಲ್ಲಿ ಭದ್ರತೆಗಾಗಿ 8 ಎಸಿಪಿ, 30 ಇನ್ಸ್‌ಪೆಕ್ಟರ್‌ಗಳು, 94 ಸಬ್ ಇನ್ಸ್‌ಪೆಕ್ಟರ್‌ಗಳು, 185 ಎಎಸ್‌ಐಗಳು 1,547 ಹೆಡ್ ಕಾನ್ಸ್‌ಟೇಬಲ್ ಮತ್ತು ಕಾನ್ಸ್‌ಟೇಬಲ್‌ಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟು […]

ನಾಳೆ RR ನಗರ ಬೈಎಲೆಕ್ಷನ್, 304 ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
| Edited By: |

Updated on: Nov 02, 2020 | 2:51 PM

Share

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ನಾಳೆ ನಡೆಯಲಿದೆ. ಹಾಗಾಗಿ, ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಒಟ್ಟು 141 ಲೊಕೇಷನ್​ಗಳಲ್ಲಿ 678 ಬೂತ್​ಗಳಿದ್ದು, 82 ಸೂಕ್ಷ್ಮ ಪ್ರದೇಶಗಳು, 596 ಸಾಮಾನ್ಯ ಪ್ರದೇಶಗಳನ್ನು ಗುರುತಿಸಲಾಗಿದ್ದು, ಭದ್ರತೆ ನಿಯೋಜಿಸಲಾಗಿದೆ.

ಈ ನಿಟ್ಟಿನಲ್ಲಿ, ಕ್ಷೇತ್ರದಲ್ಲಿ ಭದ್ರತೆಗಾಗಿ 8 ಎಸಿಪಿ, 30 ಇನ್ಸ್‌ಪೆಕ್ಟರ್‌ಗಳು, 94 ಸಬ್ ಇನ್ಸ್‌ಪೆಕ್ಟರ್‌ಗಳು, 185 ಎಎಸ್‌ಐಗಳು 1,547 ಹೆಡ್ ಕಾನ್ಸ್‌ಟೇಬಲ್ ಮತ್ತು ಕಾನ್ಸ್‌ಟೇಬಲ್‌ಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 699 ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಕ್ಷೇತ್ರದಲ್ಲಿ ಭದ್ರತೆಗಾಗಿ 2,563 ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಇದರ ಜತೆಗೆ 40 ಫ್ಲೈಯಿಂಗ್ ಸ್ಕ್ವಾಡ್, 10 KSRP ತುಕಡಿ, 3 ಸಿಎಪಿಎಫ್ ತುಕಡಿ, 20 ಸಿಎಆರ್ ತುಕಡಿ ನಿಯೋಜನೆಲ್ಲಿರಲಿವೆ. ಕ್ಷೇತ್ರದಲ್ಲಿ ಒಟ್ಟು 27 ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ನಾಳೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ R.R.ನಗರದಲ್ಲಿ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 304 ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದ 61 ಶಸ್ತ್ರಾಸ್ತ್ರಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಆಯುಕ್ತ ಕಮಲ್ ಪಂತ್ ಸ್ಪಷ್ಟಪಡಿಸಿದ್ದಾರೆ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ