ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ನಾಳೆ ನಡೆಯಲಿದೆ. ಹಾಗಾಗಿ, ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಒಟ್ಟು 141 ಲೊಕೇಷನ್ಗಳಲ್ಲಿ 678 ಬೂತ್ಗಳಿದ್ದು, 82 ಸೂಕ್ಷ್ಮ ಪ್ರದೇಶಗಳು, 596 ಸಾಮಾನ್ಯ ಪ್ರದೇಶಗಳನ್ನು ಗುರುತಿಸಲಾಗಿದ್ದು, ಭದ್ರತೆ ನಿಯೋಜಿಸಲಾಗಿದೆ.
ಈ ನಿಟ್ಟಿನಲ್ಲಿ, ಕ್ಷೇತ್ರದಲ್ಲಿ ಭದ್ರತೆಗಾಗಿ 8 ಎಸಿಪಿ, 30 ಇನ್ಸ್‌ಪೆಕ್ಟರ್‌ಗಳು, 94 ಸಬ್ ಇನ್ಸ್‌ಪೆಕ್ಟರ್‌ಗಳು, 185 ಎಎಸ್‌ಐಗಳು 1,547 ಹೆಡ್ ಕಾನ್ಸ್‌ಟೇಬಲ್ ಮತ್ತು ಕಾನ್ಸ್‌ಟೇಬಲ್‌ಗಳನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 699 ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಕ್ಷೇತ್ರದಲ್ಲಿ ಭದ್ರತೆಗಾಗಿ 2,563 ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಇದರ ಜತೆಗೆ 40 ಫ್ಲೈಯಿಂಗ್ ಸ್ಕ್ವಾಡ್, 10 KSRP ತುಕಡಿ, 3 ಸಿಎಪಿಎಫ್ ತುಕಡಿ, 20 ಸಿಎಆರ್ ತುಕಡಿ ನಿಯೋಜನೆಲ್ಲಿರಲಿವೆ. ಕ್ಷೇತ್ರದಲ್ಲಿ ಒಟ್ಟು 27 ಚೆಕ್‌ಪೋಸ್ಟ್ ನಿರ್ಮಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ನಾಳೆ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆಯಲ್ಲಿ R.R.ನಗರದಲ್ಲಿ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 304 ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದ 61 ಶಸ್ತ್ರಾಸ್ತ್ರಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಆಯುಕ್ತ ಕಮಲ್ ಪಂತ್ ಸ್ಪಷ್ಟಪಡಿಸಿದ್ದಾರೆ.