
ಬೆಂಗಳೂರು: ರಾಜ ರಾಜೇಶ್ವರಿ ನಗರ ಅಸೆಂಬ್ಲಿ ಬೈ ಎಲೆಕ್ಷನ್ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ವಿರುದ್ದ FIR ದಾಖಲಿಸಿದ್ದ RR ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅನಿಲ್ ಅವರನ್ನು ವರ್ಗಾಯಿಸಲಾಗಿದೆ. ನವೆಂಬರ್ 3ರಂದು ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.
ಆರ್ ಆರ್ ನಗರ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ರಾಜ್ಯ ಗುಪ್ತವಾರ್ತೆಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಸದ್ಯ ಮಲ್ಲೇಶ್ವರಂ ಸಂಚಾರಿ ಇನ್ಸ್ಪೆಕ್ಟರ್ ಆಗಿರುವ ಅನಿಲ್ ಆರ್ ಪಿ ಅವರನ್ನು ನೇಮಿಸಲಾಗಿದೆ. ಶನಿವಾರ ಮಧ್ಯಾಹ್ನ ಈ ಕುರಿತು ಪೊಲೀಸ್ ಮಹಾನಿರ್ದೇಶಕರ ಕಚೇರಿಯಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಚುನಾವಣಾ ಆಯೋಗ ಈ ಕುರಿತು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತ್ತು ಎಂದು ಕಾಂಗ್ರೆಸ್ ಹೇಳಿದೆ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ನಾಮಪತ್ರ ಸಲ್ಲಿಸುವಾಗ ನಡೆದಿದ ಎನ್ನಲಾದ ನೀತಿ ಸಂಹಿತೆ ಉಲ್ಲಂಘನೆ ವಿಚಾರ ಇಟ್ಟುಕೊಂಡು ಕೈ ನಾಯಕರ ವಿರುದ್ಧ ಕೇಸ್ ದಾಖಲಾಗಿತ್ತು. ಅದನ್ನು ವಿರೋಧಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿತ್ತು. ಅಷ್ಟೇ ಅಲ್ಲ, ಆರ್ ಆರ್ ನಗರ ಪೊಲೀಸ್ ಠಾಣೆಯೆದುರು ಒಂದು ದಿನ ಪ್ರತಿಭಟನೆ ನಡೆಸಿತ್ತು.
ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ದಾಖಲಾಯ್ತು FIR
Published On - 4:58 pm, Sat, 24 October 20