AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಇಲ್ಲದ 2 ಕೋಟಿ ನಗದು ಚುನಾವಣಾಧಿಕಾರಿಗಳ ವಶಕ್ಕೆ

ಮೈಸೂರು: ಮನುಗನಹಳ್ಳಿ ಬಳಿಯ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಎಂಡಿಸಿಸಿ ಬ್ಯಾಂಕ್​ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿ 2ಕೋಟಿ ಹಣ ಸಾಗಾಟ ಮಾಡುತ್ತಿದ್ದರು. ಚುನಾವಣಾಧಿಕಾರಿಗಳ ವಿಚಾರಣೆ ವೇಳೆ ಪಿರಿಯಾಪಟ್ಟಣ ಬ್ಯಾಂಕ್​ಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದ್ರೆ, ಹಣ ಸಾಗಿಸುವ ಮುನ್ನ ಬ್ಯಾಂಕ್ ಚುನಾವಣಾಧಿಕಾರಿಗಳ ಅನುಮತಿ ಪಡೆದಿಲ್ಲ. ಅಲ್ಲದೆ, ಗನ್ ಮನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಿದ್ದಾರೆ. ಸೂಕ್ತ ದಾಖಲೆ ನೀಡುವಂತೆ ನೋಟಿಸ್: ಬ್ಯಾಂಕ್​ಗೆ […]

ದಾಖಲೆ ಇಲ್ಲದ 2 ಕೋಟಿ ನಗದು ಚುನಾವಣಾಧಿಕಾರಿಗಳ ವಶಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 27, 2019 | 9:44 AM

Share

ಮೈಸೂರು: ಮನುಗನಹಳ್ಳಿ ಬಳಿಯ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಎಂಡಿಸಿಸಿ ಬ್ಯಾಂಕ್​ನ ಇಬ್ಬರು ನೌಕರರು ಬೊಲೆರೋ ವಾಹನದಲ್ಲಿ 3 ಚೀಲದಲ್ಲಿ 2ಕೋಟಿ ಹಣ ಸಾಗಾಟ ಮಾಡುತ್ತಿದ್ದರು. ಚುನಾವಣಾಧಿಕಾರಿಗಳ ವಿಚಾರಣೆ ವೇಳೆ ಪಿರಿಯಾಪಟ್ಟಣ ಬ್ಯಾಂಕ್​ಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ. ಆದ್ರೆ, ಹಣ ಸಾಗಿಸುವ ಮುನ್ನ ಬ್ಯಾಂಕ್ ಚುನಾವಣಾಧಿಕಾರಿಗಳ ಅನುಮತಿ ಪಡೆದಿಲ್ಲ. ಅಲ್ಲದೆ, ಗನ್ ಮನ್ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಾಟ ಮಾಡಿದ್ದಾರೆ.

ಸೂಕ್ತ ದಾಖಲೆ ನೀಡುವಂತೆ ನೋಟಿಸ್: ಬ್ಯಾಂಕ್​ಗೆ ಸೇರಿದ ಹಣ ಚೀಲದಲ್ಲಿ ಸಾಗಿಸುವ ಅವಶ್ಯಕತೆ ಏನು ಎಂಬ ಬಗ್ಗೆ ಚುನಾವಣಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಸೂಕ್ತ ದಾಖಲೆ ಒದಗಿಸುವಂತೆ ಎಂಡಿಸಿಸಿ ಬ್ಯಾಂಕ್​ನ ನೌಕರರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Published On - 9:39 am, Wed, 27 November 19

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು