RTI ಲಿಂಗರಾಜು ಹತ್ಯೆ ಪ್ರಕರಣ: ಕಾಂಗ್ರೆಸ್ ಮುಖಂಡ ಸೇರಿ ಎಲ್ಲ 12 ಮಂದಿ ಅಪರಾಧಿಗಳು, ಶಿಕ್ಷೆ ಏನು?

|

Updated on: Oct 28, 2020 | 5:07 PM

ಬೆಂಗಳೂರು: ಆರ್​ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಎಲ್ಲಾ 12 ಮಂದಿ ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ. ಕಾಂಗ್ರೆಸ್ ಮುಖಂಡ ಗೋವಿಂದರಾಜು ಮತ್ತು ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಾಗಿದ್ದಾರೆ. ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದ್ದು, ಸುಪಾರಿ ನೀಡಿ RTI ಕಾರ್ಯಕರ್ತ ಲಿಂಗರಾಜುನನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಎಸ್​ಐಟಿ ರಚಿಸಿ ತನಿಖೆ ನಡೆಸಲಾಗಿತ್ತು. ಎಸ್​ಪಿಪಿಯಾಗಿ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರು. ನಾಳೆ […]

RTI ಲಿಂಗರಾಜು ಹತ್ಯೆ ಪ್ರಕರಣ: ಕಾಂಗ್ರೆಸ್ ಮುಖಂಡ ಸೇರಿ ಎಲ್ಲ 12 ಮಂದಿ ಅಪರಾಧಿಗಳು, ಶಿಕ್ಷೆ ಏನು?
Follow us on

ಬೆಂಗಳೂರು: ಆರ್​ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಎಲ್ಲಾ 12 ಮಂದಿ ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದೆ. ಕಾಂಗ್ರೆಸ್ ಮುಖಂಡ ಗೋವಿಂದರಾಜು ಮತ್ತು ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಪ್ರಕರಣದಲ್ಲಿ 12 ಮಂದಿ ಅಪರಾಧಿಗಳಾಗಿದ್ದಾರೆ.

ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದ್ದು, ಸುಪಾರಿ ನೀಡಿ RTI ಕಾರ್ಯಕರ್ತ ಲಿಂಗರಾಜುನನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಹೈಕೋರ್ಟ್ ಸೂಚನೆ ಮೇರೆಗೆ ಎಸ್​ಐಟಿ ರಚಿಸಿ ತನಿಖೆ ನಡೆಸಲಾಗಿತ್ತು. ಎಸ್​ಪಿಪಿಯಾಗಿ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರು. ನಾಳೆ ಶಿಕ್ಷೆ ಪ್ರಮಾಣದ ಬಗ್ಗೆ ಕೋರ್ಟ್ ವಿಚಾರಣೆ ನಡೆಸಲಿದೆ.