ಒಂದೇ ತಿಂಗಳಿನಲ್ಲಿ ಒಂದೇ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ..

ಮಂಡ್ಯ: ಒಂದೇ ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ. ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಕೋಕೊಲ(35) ಹಾಗೂ ಸುರೇಶ್(29) ಆತ್ಮಹತ್ಯೆ ಮಾಡಿಕೊಂಡಿರುವವರು. ಮೇ 11ರಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ ನೇಣಿಗೆ ಶರಣಾದ್ರೆ. ಜೂನ್​ 4ರಂದು ಇತಿಹಾಸ ಉಪನ್ಯಾಸಕ ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆಲಸ ಸಿಕ್ಕಿಲ್ಲ ಜೊತೆಗೆ ಲಾಕ್‌ಡೌನ್‌ನಲ್ಲಿ ಎದುರಾದ ಆರ್ಥಿಕ ಸಂಕಷ್ಟದಿಂದ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ […]

ಒಂದೇ ತಿಂಗಳಿನಲ್ಲಿ ಒಂದೇ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ..

Updated on: Jun 12, 2020 | 2:24 PM

ಮಂಡ್ಯ: ಒಂದೇ ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ. ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಾದ ಕೋಕೊಲ(35) ಹಾಗೂ ಸುರೇಶ್(29) ಆತ್ಮಹತ್ಯೆ ಮಾಡಿಕೊಂಡಿರುವವರು.

ಮೇ 11ರಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ ನೇಣಿಗೆ ಶರಣಾದ್ರೆ. ಜೂನ್​ 4ರಂದು ಇತಿಹಾಸ ಉಪನ್ಯಾಸಕ ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆಲಸ ಸಿಕ್ಕಿಲ್ಲ ಜೊತೆಗೆ ಲಾಕ್‌ಡೌನ್‌ನಲ್ಲಿ ಎದುರಾದ ಆರ್ಥಿಕ ಸಂಕಷ್ಟದಿಂದ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಇವರ ಸಾವಿಗೆ ಮೂಲ ಕಾರಣ ತಿಳಿದುಬಂದಿಲ್ಲ.

Published On - 11:56 am, Fri, 12 June 20