ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

  • TV9 Web Team
  • Published On - 20:14 PM, 20 Dec 2019
ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡಿನ ದಾಳಿ ನಡೆಸಿ ಆರೋಪಿ ರಾಹುಲ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಡಿ.16ರಂದು ಸಂಪಿಗೆಹಳ್ಳಿಯಲ್ಲಿ ಭರತ್ ಎಂಬುವನ ಕೊಲೆ ನಡೆದಿತ್ತು. ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಹಿಡಿಯಲು ಪೊಲೀಸರ ತಂಡ ತೆರಳಿತ್ತು. ಈ ವೇಳೆ ಪೊಲೀಸರ ಮೇಲೆ ಆರೋಪಿ ರಾಹುಲ್ ಹಲ್ಲೆಗೆ ಮುಂದಾಗಿದ್ದಾನೆ. ಆಗ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಇನ್ಸ್​ಪೆಕ್ಟರ್​ ನಂದಕುಮಾರ್ ಸೂಚಿಸಿದ್ದಾರೆ. ಆದ್ರೂ ಓರ್ವ ಪೇದೆಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾನೆ. ಆರೋಪಿ ಭರತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.