AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಹತ್ತಿದ ಯುವತಿ ಮೇಲೆ ಕಾಮುಕ ಚಾಲಕನಿಂದ ನೀಚ ಕೃತ್ಯ, ಆರೋಪಿ ಬಂಧನ

ಆಟೋ ಹತ್ತಿದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ‌. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಆಟೋ ಹತ್ತಿದ ಯುವತಿ ಮೇಲೆ ಕಾಮುಕ ಚಾಲಕನಿಂದ ನೀಚ ಕೃತ್ಯ, ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Dec 18, 2020 | 7:24 AM

Share

ಬೆಂಗಳೂರು: ಆಟೋ ಹತ್ತಿದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದೇವನಹಳ್ಳಿಯ ನಿವಾಸಿ ಮುಬಾರಕ್(28) ಬಂಧಿತ ಆರೋಪಿ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಪೊಲೀಸರು ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ.

ಕಂಪ್ಯೂಟರ್ ಸೈನ್ಸ್ ಕೋರ್ಸ್ ವ್ಯಾಸಂಗದ ಜತೆಗೆ ಪಾರ್ಟ್ ಟೈಂ ಕೆಲಸ ಮಾಡ್ತಿದ್ದ ಸಂತ್ರಸ್ತೆ ಮದುವೆಗಳಲ್ಲಿ ಸ್ವಾಗತಕಾರರಾಗಿ ಕೆಲಸ ಮಾಡುತ್ತಿದ್ದರು. ಆದ್ರೆ ಅಂದು ವಿವಾಹ ಸಮಾರಂಭ ಮುಗಿಯುವುದರೊಳಗೆ ತಡ ರಾತ್ರಿಯಾಗಿತ್ತು. ಹೀಗಾಗಿ ಆಕೆ ರಾತ್ರಿಯಿಡಿ ಮಂಟಪದಲ್ಲಿಯೇ ತಗ್ಗಿ ಬೆಳಗ್ಗೆ 6ಗಂಟೆಗೆ ಥಣಿಸಂದ್ರ ಮುಖ್ಯರಸ್ತೆ ಬಳಿ ಬಸ್‌ಗಾಗಿ ಕಾಯುವ ವೇಳೆ ಬಸ್​ಗೆ ಕಾದರೇ ಸಮಯ ವ್ಯರ್ಥ ಎಂದು ಆರೋಪಿ ಮುಬಾರಕ್ ಆಟೋ ಹತ್ತಿದ್ದಾರೆ.

ಕೃತ್ಯ ಎಸಗಿ ಎಸ್ಕೇಪ್ ಆದ: ನಾಗವಾರದ ಕಡೆ ಹೋಗಲು ತಿಳಿಸಿದ್ದಾರೆ. ಆದರೆ ಆರೋಪಿ ಆಟೋ ಚಾಲಕ ಸಂತ್ರಸ್ತೆ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಬೇರೆ ಕಡೆ ಹೋಗಿ ಸ್ನೇಹಿತರೊಬ್ಬರು ಹಣ ನೀಡುತ್ತಾರೆ, ಪಡೆಯಬೇಕೆಂದಿದ್ದಾನೆ. ಆಟೋ ಚಾಲಕನ ಮಾತು ನಂಬಿ ಸಂತ್ರಸ್ತೆ ಸುಮ್ಮನಾಗಿದ್ದಾರೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೃತ್ಯವೆಸಗಿ ಯುವತಿಯನ್ನ ಬಿಟ್ಟು ಪರಾರಿಯಾಗಿದ್ದಾನೆ.

ನಂತರ ರಸ್ತೆಯಲ್ಲಿ ಹೋಗುತ್ತಿದ್ದವರ ಸಹಾಯ ಪಡೆದು ಸಂತ್ರಸ್ತೆ ಮನೆಗೆ ಹೋಗಿದ್ದಾರೆ. ಆಟೋ ನಂಬರ್ ಸಮೇತ ಠಾಣೆಗೆ ದೂರು ನೀಡಿದ್ದಾರೆ. ಯುವತಿ ದೂರು ಆಧರಿಸಿ ಆರೋಪಿ ಮುಬಾರಕ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ‌. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಫ್ರೆಂಡ್ಸ್ ಜೊತೆ ಎಣ್ಣೆ ಪಾರ್ಟಿ ಮಾಡಿ ಮನೆಗೆ ಹೋಗುತ್ತಿದ್ದವ ನಡು ರಸ್ತೆಯಲ್ಲಿ ಭೀಕರವಾಗಿ ಕೊಲೆಯಾದ..

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್