Santro Ravi in Bengaluru: ಬ್ಲ್ಯಾಕ್​ಮೇಲರ್ ಖದೀಮನಿಗೆ ಮತ್ತೊಮ್ಮೆ ಆರೋಗ್ಯದಲ್ಲಿ ಏರುಪೇರು, ಬೌರಿಂಗ್ ಆಸ್ಪತ್ರೆಯಲ್ಲಿ ತಪಾಸಣೆ

ಅರುಣ್​ ಕುಮಾರ್​ ಬೆಳ್ಳಿ

Updated on: Jan 21, 2023 | 2:03 PM

ರವಿ (ಇವನ ಅಸಲು ಹೆಸರು ಮಂಜುನಾಥ) ಬಾಯಿ ಬಿಟ್ಟರೆ ಕೆಲ ಪುಢಾರಿಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗಲಾರದು ಅಂತ ಮಾತ್ರ ಜನ ಮಾತಾಡಿಕೊಳ್ಳುತ್ತಿದ್ದಾರೆ!

ಬೆಂಗಳೂರು:  ನ್ಯಾಯಾಂಗ ಕಸ್ಟಡಿಯಲ್ಲಿದ್ದ ಸ್ಯಾಂಟ್ರೋ ರವಿಯನ್ನು (Santro Ravi) ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ಮೈಸೂರಿಂದ ಬೆಂಗಳೂರಿಗೆ ಕರೆತಂದಾಗಿದೆ. ಆದರೆ ಇಲ್ಲೂ ಅವನ ಆರೋಗ್ಯದಲ್ಲಿ ಏರುಪೇರಾದ ಉಂಟಾದ ಕಾರಣ ವೈದ್ಯಕೀಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ (Bowring Hospital) ತರಲಾಗಿತ್ತು. ತಪಾಸಣೆಯ (checkup) ಬಳಿಕ ಅವನನ್ನು ಆಸ್ಪತ್ರೆಯಿಂದ ಪೊಲೀಸ್ ವಾಹನವೊಂದರಲ್ಲಿ ಸಿಐಡಿ ಅಧಿಕಾರಿಗಳು ಕರೆದೊಯ್ಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ತನಿಖೆ ಯಾವ ಹಂತದಲ್ಲಿ ಅಂತ ಜನರಿಗೆ ಗೊತ್ತಾಗುತ್ತಿಲ್ಲ. ರವಿ (ಇವನ ಅಸಲು ಹೆಸರು ಮಂಜುನಾಥ) ಬಾಯಿ ಬಿಟ್ಟರೆ ಕೆಲ ಪುಢಾರಿಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗಲಾರದು ಅಂತ ಮಾತ್ರ ಜನ ಮಾತಾಡಿಕೊಳ್ಳುತ್ತಿದ್ದಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.