ಕೊರೊನಾ ವಿಷಾದ ಇದ್ರೂ.. ಸ್ಮಶಾನದಲ್ಲಿ ಮೌಢ್ಯನಿಷೇಧಕ್ಕೆ ‘ಚಾಲನೆ’ ನೀಡಿದ ಜಾರಕಿಹೊಳಿ

ಬೆಳಗಾವಿ: ಕೊರೊನಾ ಬಿಕ್ಕಟ್ಟಿನ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡಿದ್ದ ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ‌ ಮೌಢ್ಯ ನಿಷೇಧ ಕಾರ್ಯಕ್ರಮ ನೆರವೇರಿಸಿದ್ದಾರೆ. ಕೊರೊನಾ ವಿಷಾದ ಇದ್ರೂ.. ಬೆಳಗಾವಿಯ ಸದಾಶಿವನಗರ ಸ್ಮಶಾನದಲ್ಲಿ ನೂತನ ಫಾರ್ಚುನರ್ ಕಾರಿಗೆ ಪೂಜೆ , ಪುಷ್ಪಾರ್ಚನೆ ಮಾಡಿ ಬಸವ ನಾಮಸ್ಮರಣೆ ಮಾಡಿದ್ದಾರೆ. ಸಾಮಾಜಿಕ ಅಂತರ ಮರೆತು ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಇನ್ನು ಶ್ರೀ ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ […]

ಕೊರೊನಾ ವಿಷಾದ ಇದ್ರೂ.. ಸ್ಮಶಾನದಲ್ಲಿ ಮೌಢ್ಯನಿಷೇಧಕ್ಕೆ ‘ಚಾಲನೆ’ ನೀಡಿದ ಜಾರಕಿಹೊಳಿ
ಸಾಧು ಶ್ರೀನಾಥ್​

Updated on: Jul 13, 2020 | 2:09 PM

ಬೆಳಗಾವಿ: ಕೊರೊನಾ ಬಿಕ್ಕಟ್ಟಿನ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡಿದ್ದ ಸ್ಮಶಾನದಲ್ಲಿ ಸತೀಶ್ ಜಾರಕಿಹೊಳಿ‌ ಮೌಢ್ಯ ನಿಷೇಧ ಕಾರ್ಯಕ್ರಮ ನೆರವೇರಿಸಿದ್ದಾರೆ.

ಕೊರೊನಾ ವಿಷಾದ ಇದ್ರೂ..
ಬೆಳಗಾವಿಯ ಸದಾಶಿವನಗರ ಸ್ಮಶಾನದಲ್ಲಿ ನೂತನ ಫಾರ್ಚುನರ್ ಕಾರಿಗೆ ಪೂಜೆ , ಪುಷ್ಪಾರ್ಚನೆ ಮಾಡಿ ಬಸವ ನಾಮಸ್ಮರಣೆ ಮಾಡಿದ್ದಾರೆ. ಸಾಮಾಜಿಕ ಅಂತರ ಮರೆತು ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು.

ಇನ್ನು ಶ್ರೀ ನಿಜಗುಣಾನಂದ ಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ 8 ಸ್ವಾಮೀಜಿಗಳು ಉಪಸ್ಥಿತರಿದ್ರು. ಸ್ಮಶಾನಕ್ಕೆ ಯಾರೂ ಆಗಮಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮ ವೀಕ್ಷಿಸಬೇಕು ಎಂದು ಸತೀಶ್ ಜಾರಕಿಹೊಳಿ‌ ಮನವಿ ಮಾಡಿದ್ದರು. ಆದರೂ ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಬೆಂಬಲಿಗರು ಭಾಗಿಯಾಗಿದ್ದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us