UPSC Civil Service Exam: UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ನಿರಾಕರಿಸಿದ ಸುಪ್ರೀಂ ಕೋರ್ಟ್

UPSC Civil Service Exam: UPSC ನಾಗರಿಕ ಸೇವಾ ಪರೀಕ್ಷೆ (UPSC Civil Service Exam) ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

UPSC Civil Service Exam: UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ನಿರಾಕರಿಸಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Follow us
TV9 Web
| Updated By: ganapathi bhat

Updated on:Apr 06, 2022 | 7:43 PM

ದೆಹಲಿ: UPSC ನಾಗರಿಕ ಸೇವಾ ಪರೀಕ್ಷೆ (UPSC Civil Service Exam) ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕೇಂದ್ರ ಲೋಕಸೇವಾ ಆಯೋಗ (Union Public Service Commission – UPSC) ನಡೆಸುವ ನಾಗರಿಕ ಸೇವಾ ಪರೀಕ್ಷೆಗಳಲ್ಲಿ (Civil Service Examination – CSE) ಪಾಲ್ಗೊಳ್ಳಲು 2020 ಕೊನೆಯ ಅವಕಾಶವಾಗಿದ್ದ ಅಭ್ಯರ್ಥಿಗಳಿಗೆ ಇನ್ನೊಮ್ಮೆ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು ಎಂದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ, ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನಿಗದಿತ ವಯೋಮಾನ ಮೀರಿದ, ಯುಪಿಎಸ್​ಸಿ ನಾಗರಿಕ ಸೇವಾ (UPSC Civil Service Examination) ಅಭ್ಯರ್ಥಿಗಳಿಗೆ ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ನೀಡುವ ವಿಚಾರವನ್ನು ಕೇಂದ್ರ ಸರ್ಕಾರ ವಿರೋಧಿಸುತ್ತದೆ ಎಂದು ಸುಪ್ರೀಂ ಕೋರ್ಟ್​ಗೆ ಈ ಹಿಂದೆ ಫೆ. 9ರಂದು ಹೇಳಿಕೆ ನೀಡಿತ್ತು. 2020ರಲ್ಲಿ ಕೊವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದ ಕೊನೆಯ ಬಾರಿ ಪರೀಕ್ಷೆ ಎದುರಿಸಲು ವಿಫಲರಾದವರು ಕೂಡ ವಯಸ್ಸು ಮೀರಿದ್ದರೆ ಪರೀಕ್ಷೆಗೆ ಹಾಜರಾಗುವ ಅವಕಾಶ ನೀಡಲು ಬಯಸುವುದಿಲ್ಲ ಎಂದು ಸರ್ಕಾರ ಕೋರ್ಟ್​ಗೆ ತಿಳಿಸಿತ್ತು.

ಒಂದು ವೇಳೆ, UPSC Civil Service ಪರೀಕ್ಷೆ ಬರೆಯಲು ಅರ್ಹ ವಯಸ್ಸಿನ ಮಿತಿಯೊಳಗೆ ಅಭ್ಯರ್ಥಿ ಇದ್ದಾರೆ ಎಂದಾದರೆ ಅಂಥವರಿಗೆ ಈ ಬಾರಿ ಪರೀಕ್ಷೆ ಬರೆಯುವ ಅವಕಾಶ ನೀಡಬಹುದು ಎಂದು ಹೇಳಿತ್ತು. ಸುಪ್ರೀಂ ಕೋರ್ಟ್​ನ ನ್ಯಾಯಮೂರ್ತಿ ಎ.ಎಮ್. ಖನ್ವಿಲ್ಕರ್ ನೇತೃತ್ವದ ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿತ್ತು.

ಇದನ್ನೂ ಓದಿ: UPSC Civil Service Exam: ವಯೋಮಿತಿ ಮೀರಿದವರಿಗೆ UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶವಿಲ್ಲ: ಕೇಂದ್ರ ಸರ್ಕಾರ

JEE-NEET 2020: ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Published On - 11:48 am, Wed, 24 February 21