ಸರ್ಕಾರದ ಆದೇಶ ಉಲ್ಲಂಘಿಸಿ ಮಂಡ್ಯದಲ್ಲಿ ತರಗತಿ ಆರಂಭ
ಮಂಡ್ಯ: ಜೂನ್ 25ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ ತರಗತಿ ಆರಂಭಿಸಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಇಲ್ಲಿ ಸರ್ಕಾರದ ಆದೇಶಕ್ಕೆ ಸ್ವಲ್ಪವೂ ಕಿಮ್ಮತ್ತಿಲ್ಲ. ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಓಪನ್ ಆಗಿವೆ. ಮಂಡ್ಯ ಶಾಸಕ ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಷನ್ ಸೊಸೈಟಿ, ಆದರ್ಶ ಪ್ರೌಢಶಾಲೆ ಸೇರಿ ಮಂಡ್ಯ ಜಿಲ್ಲೆಯ ಹಲವು ಶಾಲೆಗಳಲ್ಲಿ ತರಗತಿ ಆರಂಭವಾಗಿದೆ. ಕಳೆದ ಒಂದು ವಾರದಿಂದ ಶಿಕ್ಷಕರು ತರಗತಿಗಳನ್ನ ಆರಂಭಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ […]
ಮಂಡ್ಯ: ಜೂನ್ 25ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ ತರಗತಿ ಆರಂಭಿಸಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಇಲ್ಲಿ ಸರ್ಕಾರದ ಆದೇಶಕ್ಕೆ ಸ್ವಲ್ಪವೂ ಕಿಮ್ಮತ್ತಿಲ್ಲ. ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಓಪನ್ ಆಗಿವೆ.
ಮಂಡ್ಯ ಶಾಸಕ ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಷನ್ ಸೊಸೈಟಿ, ಆದರ್ಶ ಪ್ರೌಢಶಾಲೆ ಸೇರಿ ಮಂಡ್ಯ ಜಿಲ್ಲೆಯ ಹಲವು ಶಾಲೆಗಳಲ್ಲಿ ತರಗತಿ ಆರಂಭವಾಗಿದೆ. ಕಳೆದ ಒಂದು ವಾರದಿಂದ ಶಿಕ್ಷಕರು ತರಗತಿಗಳನ್ನ ಆರಂಭಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿ ನಡೆಯುತ್ತಿದೆ.
ಅಂತರ ಪಾಲಿಸಿ ತರಗತಿಗಳನ್ನು ಆರಂಭಿಸಿದ್ದಾರೆ. ಆದ್ರೆ ಶಿಕ್ಷಕರು ಮಾಸ್ಕ್ ಧರಿಸದೆ ಪಾಠಗಳನ್ನು ಮಾಡುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಕಳಿಸುವುದಕ್ಕೆ ಪೋಷಕರ ಹಿಂದೇಟು ಹಾಕುತ್ತಿದ್ದಾರೆ ಆದರೂ ಒತ್ತಡ ಹೇರಿ ಶಿಕ್ಷಕರು ವಿದ್ಯಾರ್ಥಿಗಳನ್ನ ಶಾಲೆಗೆ ಕರೆಸಿಕೊಳ್ಳುತ್ತಿದ್ದಾರೆ. ಕೊರೊನಾ ಭೀತಿ ನಡುವೆಯೇ ಮಕ್ಕಳು ಪಾಠ ಕೇಳುತ್ತಿದ್ದಾರೆ. ಶಿಕ್ಷಕರ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಜೀವದ ಜೊತೆ ಶಿಕ್ಷಕರು ಆಟ ಆಡ್ತಿದ್ದಾರೆ ಎಂದಿದ್ದಾರೆ.
Published On - 8:17 am, Tue, 16 June 20