ಪ್ರಚೋದನಕಾರಿ ಹೇಳಿಕೆ: ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಶಿವಮೊಗ್ಗ: ಕೋಮು ಸೌಹಾರ್ಧ ಕೆಡುವಂಥ ಪ್ರಚೋದನಕಾರಿ ಹೇಳಿಕೆ ನೀಡಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್‌ ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಸಂಘಟನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ. ಸಚಿವ ಕೆಎಸ್‌ ಈಶ್ವರಪ್ಪ ಅವರು ನಿನ್ನೆ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದಂತೆ ಕಾಶಿ ಹಾಗೂ ಮಥುರಾದಲ್ಲಿ ಕೂಡ ಮಸೀದಿಗಳಿವೆ. ಅವುಗಳನ್ನು ಕೂಡಾ ದ್ವಂಸ ಮಾಡಿ ಅಲ್ಲಿಯೂ ಕೂಡಾ ಭವ್ಯ ಮಂದಿರಗಳನ್ನು ನಿರ್ಮಾಣ ಮಾಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರಿಂದ ಕೆರಳಿರುವ ಎಸ್‌ಡಿಪಿಐ […]

ಪ್ರಚೋದನಕಾರಿ ಹೇಳಿಕೆ: ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ
Edited By:

Updated on: Aug 06, 2020 | 2:48 PM

ಶಿವಮೊಗ್ಗ: ಕೋಮು ಸೌಹಾರ್ಧ ಕೆಡುವಂಥ ಪ್ರಚೋದನಕಾರಿ ಹೇಳಿಕೆ ನೀಡಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್‌ ಈಶ್ವರಪ್ಪ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಸಂಘಟನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ.

ಸಚಿವ ಕೆಎಸ್‌ ಈಶ್ವರಪ್ಪ ಅವರು ನಿನ್ನೆ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದಂತೆ ಕಾಶಿ ಹಾಗೂ ಮಥುರಾದಲ್ಲಿ ಕೂಡ ಮಸೀದಿಗಳಿವೆ. ಅವುಗಳನ್ನು ಕೂಡಾ ದ್ವಂಸ ಮಾಡಿ ಅಲ್ಲಿಯೂ ಕೂಡಾ ಭವ್ಯ ಮಂದಿರಗಳನ್ನು ನಿರ್ಮಾಣ ಮಾಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದರಿಂದ ಕೆರಳಿರುವ ಎಸ್‌ಡಿಪಿಐ ಸಂಘಟನೆ ಈಗ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಸಚಿವ ಕೆ ಎಸ್‌ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿದೆ.