ನಗರಸಭೆ ಅರಾಜಕತೆ, ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಇಂದು ರಾಮನಗರ ಬಂದ್
ಜಿಲ್ಲೆಯ ನಗರಸಭೆ ಅರಾಜಕತೆ ಹಾಗೂ ರಾಮನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಇಂದು ರಾಮನಗರ ನಗರ ಬಂದ್ಗೆ ಕರೆ ನೀಡಲಾಗಗಿದೆ.
ರಾಮನಗರ: ಜಿಲ್ಲೆಯ ನಗರಸಭೆ ಅರಾಜಕತೆ ಹಾಗೂ ರಾಮನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಇಂದು ರಾಮನಗರ ನಗರ ಬಂದ್ಗೆ ಕರೆ ನೀಡಲಾಗಗಿದೆ. ಜಾನ ಜಾಗೃತಿ ವೇದಿಕೆವತಿಯಿಂದ ಬಂದ್ಗೆ ಕರೆ ನೀಡಲಾಗಿದ್ದು, ಬಂದ್ ಹಿನ್ನೆಲೆಯಿಂದಾಗಿ ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ವ್ಯಾಪರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನ ಬಂದ್ ಮಾಡಿದ್ದಾರೆ. ಬಂದ್ ಹಿನ್ನೆಲೆಯಿಂದಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ನಗರಸಭಾ ವ್ಯಾಪ್ತಿಯಲ್ಲಿ ನಿಷೇಧಾಜ್ಷೆ ಜಾರಿಯಾಗಿದೆ. ಅಲ್ಲದೆ ಬಂದ್ಗೆ ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ರಾಮನಗರ ನಗರ ಬಂದ್ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ನಗರದಾದ್ಯಂತ ಬೈಕ್ ರ್ಯಾಲಿ ನಡೆಸಿ ಬಂದ್ಗೆ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡಲಾಗಿತ್ತು.
Published On - 9:15 am, Sat, 20 February 21