ಬೆಂಕಿ ಹಚ್ಚಿಕೊಂಡು ರೈತನ ಆತ್ಮಹತ್ಯೆ
ಕಲಬುರಗಿ: ಅನ್ನದಾತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಬಸವರಾಜ್ ಕೊನೆಯುಸಿರೆಳೆದ ರೈತ. ಬಸವರಾಜ್, ಖಾಸಗಿಯಾಗಿ ಮತ್ತು ಬ್ಯಾಂಕ್ನಲ್ಲಿ ಆರು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಅತಿವೃಷ್ಟಿಯಿಂದ ಬೆಳೆ ಹಾಳಾದ ಹಿನ್ನೆಲೆಯಲ್ಲಿ ನೊಂದಿದ್ದ ರೈತ ಅನ್ಯ ಮಾರ್ಗ ಕಾಣದೆ ಇಹಲೋಕ ತ್ಯಜಿಸಿದ್ದಾರೆ. ಸೇಡಂ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ: ಅನ್ನದಾತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಬಸವರಾಜ್ ಕೊನೆಯುಸಿರೆಳೆದ ರೈತ.
ಬಸವರಾಜ್, ಖಾಸಗಿಯಾಗಿ ಮತ್ತು ಬ್ಯಾಂಕ್ನಲ್ಲಿ ಆರು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಅತಿವೃಷ್ಟಿಯಿಂದ ಬೆಳೆ ಹಾಳಾದ ಹಿನ್ನೆಲೆಯಲ್ಲಿ ನೊಂದಿದ್ದ ರೈತ ಅನ್ಯ ಮಾರ್ಗ ಕಾಣದೆ ಇಹಲೋಕ ತ್ಯಜಿಸಿದ್ದಾರೆ. ಸೇಡಂ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Published On - 12:14 pm, Thu, 8 October 20




