
ದಾವಣಗೆರೆ: ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಟ ಕೊಡಗನೂರ ಜಯಕುಮಾರ ಇಂದು ನಿಧನರಾಗಿದ್ದಾರೆ. 72 ವರ್ಷದ ನಟ ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ಕೊಡಗನೂರ ಜಯಕುಮಾರ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅಸುನೀಗಿದ್ದಾರೆ. ಜಯಕುಮಾರ 100ಕ್ಕೂ ಹೆಚ್ಚು ಕನ್ನಡ ಹಾಗೂ ತೆಲಗು ಚಿತ್ರಗಳಲ್ಲಿ ನಟಿಸಿದ್ದರು. 2019 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಜಿಲ್ಲೆಯ ಕೊಡಗನೂರ ಗ್ರಾಮದ ನಿವಾಸಿಯಾಗಿದ್ದ ಜಯಕುಮಾರ ಪತ್ನಿ ಹಾಗೂ ಇಬ್ಬರು ಪುತ್ರರನ್ನ ಅಗಲಿದ್ದಾರೆ.