ಸರಣಿ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ

ಹಾಸನ: ಅರಸೀಕೆರೆ ತಾಲೂಕಿನ ಸೂಳೆಕೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೂವರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಾರಿಗೆ ಬಸ್, ಟಾಟಾ ಮ್ಯಾಜಿಕ್ ವಾಹನ ಮತ್ತು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತವಾಗಿದೆ. ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಗಾಯಾಳು ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ.   ಕಲಬುರಗಿ: ಅಫಜಲಪುರ […]

ಸರಣಿ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ
Follow us
ಸಾಧು ಶ್ರೀನಾಥ್​
|

Updated on:Jan 30, 2020 | 1:54 PM

ಹಾಸನ: ಅರಸೀಕೆರೆ ತಾಲೂಕಿನ ಸೂಳೆಕೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲಿಯೇ ಮೂವರು ದುರ್ಮರಣ ಹೊಂದಿದ್ದಾರೆ. ಬೆಂಗಳೂರು-ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಾರಿಗೆ ಬಸ್, ಟಾಟಾ ಮ್ಯಾಜಿಕ್ ವಾಹನ ಮತ್ತು ಗೂಡ್ಸ್ ವಾಹನ ಮಧ್ಯೆ ಸರಣಿ ಅಪಘಾತವಾಗಿದೆ.

ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ಗಾಯಾಳು ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದಾರೆ.

ಕಲಬುರಗಿ: ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿಯೂ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ. ರಾಜಕುಮಾರ್ ಖಂಡೇಕರ್(24), ಗುಂಡಪ್ಪಾ ಮಾನೆ(20) ಹಾಗೂ ಮಹಾದೇವಪ್ಪಾ ಸಾಲೆಗಾಂವ್ (30) ಮೃತ ದುರ್ದೈವಿಗಳು.

ಜಾತ್ರಾ‌ ಮಹೋತ್ಸವದಲ್ಲಿ ಪಾಲ್ಗೊಂಡು ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಇಂದು ಬೆಳಗಿನ ಜಾವ ರೇವೂರ್ ಗ್ರಾಮದ ಬಳಿ ಲಾರಿ ಡಿಕ್ಕಿಯೊಡೆದು ಬೈಕ್​ನಲ್ಲಿದ್ದ ಮೂವರೂ ಸಾವಿಗೀಡಾಗಿದ್ದಾರೆ. ಮೃತರೆಲ್ಲರೂ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದ ನಿವಾಸಿಗಳು. ಘಟನೆ ಸಂಬಂಧ ರೇವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:49 pm, Thu, 30 January 20