
ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 7 ಜನ ಮೃತಪಟ್ಟಿರುವ ಭೀಕರ ಅಪಘಾತ ಸಾವಳಗಿ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು, ಮೂವರು ಪುರುಷರು ಸಾವನ್ನಪ್ಪಿದ್ದಾನೆ.
ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಆಳಂದ ನಿವಾಸಿಗಳು. ಇನ್ನೂಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಳಂದದಿಂದ ಕಲಬುರಗಿ ನಗರಕ್ಕೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.