AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ. ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ […]

ಕುಂದಾನಗರಿ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎದುರಾಯ್ತು ಆಪತ್ತು
KUSHAL V
| Edited By: ಸಾಧು ಶ್ರೀನಾಥ್​|

Updated on: Aug 06, 2020 | 9:42 AM

Share

ಬೆಳಗಾವಿ: ಭಾರಿ ಮಳೆಯ ಅಬ್ಬರಕ್ಕೆ ನಗರದ ಜನರು ತತ್ತರಿಸಿ ಹೋಗಿದ್ದಾರೆ. ಧಾರಾಕಾರ ಮಳೆಯಿಂದ ಯಳ್ಳೂರ ರಸ್ತೆ, ಆನಂದ ನಗರ, ವಡಗಾಂವ್​ನಲ್ಲಿ ಮಳೆ ನೀರು ನಿಲ್ಲುತ್ತಿದೆ. ಹೀಗಾಗಿ, ಏರಿಯಾದ ಅರ್ಧದಷ್ಟು ಮನೆಗಳು ಮುಳುಗಡೆಯಾಗುತ್ತಿದೆ.

ರಾತ್ರಿಯಿಡೀ ಸುರಿದ ಮಳೆಯಿಂದ ಮನೆಗಳಿಗೆ ನೀರು ನುಗುತ್ತಿದ್ದು ಮೂರು ಕಾಲೋನಿಗಳು ಭಾಗಶಃ ಆವೃತವಾಗಿವೆ.

ರಸ್ತೆಯಲ್ಲಿ ತುಂಬಿರೋ ನೀರಲ್ಲಿ ಮಹಿಳೆಯರು, ವೃದ್ಧರು ಓಡಾಡುವ ಸ್ಥಿತಿ ಎದುರಾಗಿದೆ. ವಿಪರ್ಯಾಸವೆಂದರೆ, ಕಳೆದ ವರ್ಷವೂ ಈ ಕಾಲೋನಿಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿತ್ತು. ಆದರೆ, ಬೆಳಗಾವಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆಯನ್ನ ಬಗೆಹರಿಸದೆ ಈ ಬಾರಿಯೂ ಆಪತ್ತು ಎದುರಾಗಿದೆ.

ಕಳೆದ ಬಾರಿಯ ಮಳೆಗೆ ನೀರು ನುಗ್ಗಿದ್ದರೂ ಅಧಿಕಾರಿಗಳು ಈ ಸಲ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಂಡಿಲ್ಲ. ಹಾಗಾಗಿ, ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!