ಸಿಡಿಲು ಬಡಿದು ಜಮೀನಿನಲ್ಲಿ ಕಟ್ಟಿಹಾಕಿದ್ದ 20ಕ್ಕೂ ಹೆಚ್ಚು ಕುರಿಗಳು ಸಾವು
ಯಾದಗಿರಿ: ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ನರಸಪ್ಪಗೆ ಸೇರಿದ ಕುರಿಗಳು ಸಾವನ್ನಪ್ಪಿದೆ. ಕುರಿಗಳನ್ನು ರಾತ್ರಿ ಜಮೀನಿನಲ್ಲಿ ಕಟ್ಟಿಹಾಕಿದ್ದ ವೇಳೆ ಘಟನೆ ಸಂಭವಿಸಿದೆ. ಘಟನೆ ವೇಳೆ ನರಸಪ್ಪ ಕುರಿಗಳ ಜೊತೆಗಿದ್ದ. ಆದರೆ, ಅದೃಷ್ಟವಶಾತ್ ನರಸಪ್ಪ ಪ್ರಾಣಾಪಯದಿಂದ ಪಾರಾಗಿದ್ದಾನೆ.