ಕರ್ತವ್ಯ ನಿರ್ಲಕ್ಷ್ಯ ಸಾಬೀತು, ಮೆಗ್ಗಾನ್ ಆಸ್ಪತ್ರೆ ವೈದ್ಯ ಅಮಾನತು
ಶಿವಮೊಗ್ಗ: ಕರ್ತವ್ಯ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿ ದುರ್ಗಪ್ಪ ಎಂಬ ವ್ಯಕ್ತಿ ಉಸಿರಾಟದ ಸಮಸ್ಯೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯ ರಾಮಚಂದ್ರಾಚಾರಿಯ ಬದಲು ಗೃಹವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ದುರ್ಗಪ್ಪ ಮೃತಪಟ್ಟಿದ್ದಾರೆ. ಹೀಗಾಗಿ ದುರ್ಗಪ್ಪ ಸಾವಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ […]
ಶಿವಮೊಗ್ಗ: ಕರ್ತವ್ಯ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿ ದುರ್ಗಪ್ಪ ಎಂಬ ವ್ಯಕ್ತಿ ಉಸಿರಾಟದ ಸಮಸ್ಯೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯ ರಾಮಚಂದ್ರಾಚಾರಿಯ ಬದಲು ಗೃಹವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ದುರ್ಗಪ್ಪ ಮೃತಪಟ್ಟಿದ್ದಾರೆ. ಹೀಗಾಗಿ ದುರ್ಗಪ್ಪ ಸಾವಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರ ಕರ್ತವ್ಯನಿರ್ಲಕ್ಷ್ಯ ಸಾಬೀತಾಗಿದೆ. ಹೀಗಾಗಿ ರಾಮಚಂದ್ರಾಚಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸಿಮ್ಸ್ ನಿರ್ದೇಶಕ ಡಾ.ಲೇಪಾಕ್ಷಿಯಿಂದ ಸಸ್ಪೆಂಡ್ ಆದೇಶ ನೀಡಿದ್ದಾರೆ.