ಕರ್ತವ್ಯ ನಿರ್ಲಕ್ಷ್ಯ ಸಾಬೀತು, ಮೆಗ್ಗಾನ್ ಆಸ್ಪತ್ರೆ ವೈದ್ಯ ಅಮಾನತು

ಶಿವಮೊಗ್ಗ: ಕರ್ತವ್ಯ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿ ದುರ್ಗಪ್ಪ ಎಂಬ ವ್ಯಕ್ತಿ ಉಸಿರಾಟದ ಸಮಸ್ಯೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯ ರಾಮಚಂದ್ರಾಚಾರಿಯ ಬದಲು ಗೃಹವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ದುರ್ಗಪ್ಪ ಮೃತಪಟ್ಟಿದ್ದಾರೆ. ಹೀಗಾಗಿ ದುರ್ಗಪ್ಪ ಸಾವಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ […]

ಕರ್ತವ್ಯ ನಿರ್ಲಕ್ಷ್ಯ ಸಾಬೀತು, ಮೆಗ್ಗಾನ್ ಆಸ್ಪತ್ರೆ ವೈದ್ಯ ಅಮಾನತು
ಸಾಧು ಶ್ರೀನಾಥ್​

Updated on: Feb 26, 2020 | 4:14 PM

ಶಿವಮೊಗ್ಗ: ಕರ್ತವ್ಯ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ನಿವಾಸಿ ದುರ್ಗಪ್ಪ ಎಂಬ ವ್ಯಕ್ತಿ ಉಸಿರಾಟದ ಸಮಸ್ಯೆ ಇದೆ ಎಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯ ರಾಮಚಂದ್ರಾಚಾರಿಯ ಬದಲು ಗೃಹವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದಾರೆ. ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ದುರ್ಗಪ್ಪ ಮೃತಪಟ್ಟಿದ್ದಾರೆ. ಹೀಗಾಗಿ ದುರ್ಗಪ್ಪ ಸಾವಿಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪ್ರಾಥಮಿಕ ತನಿಖೆ ವೇಳೆ ಮೆಗ್ಗಾನ್ ಆಸ್ಪತ್ರೆಯ ವೈದ್ಯ ಡಾ.ಎ.ರಾಮಚಂದ್ರಾಚಾರಿ ಅವರ ಕರ್ತವ್ಯನಿರ್ಲಕ್ಷ್ಯ ಸಾಬೀತಾಗಿದೆ. ಹೀಗಾಗಿ ರಾಮಚಂದ್ರಾಚಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸಿಮ್ಸ್‌ ನಿರ್ದೇಶಕ ಡಾ.ಲೇಪಾಕ್ಷಿಯಿಂದ ಸಸ್ಪೆಂಡ್ ಆದೇಶ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us