ಭಕ್ತನ ಮೇಲೆ ಹಲ್ಲೆ ಪ್ರಕರಣ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟ DC-SP

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಗ್ರಾಮದಲ್ಲಿರುವ ಸುಪ್ರಸಿದ್ಧ ಚೌಡೇಶ್ವರಿ ದೇವಸ್ಥಾನದಲ್ಲಿ ನಿನ್ನೆ ಭಕ್ತನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಇಬ್ಬರೂ ದೇವಸ್ಥಾನಕ್ಕೆ ಭೇಟಿ ಕೊಟ್ಟರು. ನಿನ್ನೆ ಮಧ್ಯಾಹ್ನ ದೇಗುಲದ ಪ್ರಧಾನ ಅರ್ಚಕರಾದ ಶೇಷಗಿರಿ ಭಟ್​ ಸಹೋದರನಿಂದ ಭಕ್ತನೊಬ್ಬನ ಮೇಲೆ ಹಲ್ಲೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ KB ಶಿವಕುಮಾರ್ ಹಾಗೂ SP ಕೆ.ಎಂ. ಶಾಂತರಾಜು ಭೇಟಿಕೊಟ್ಟರು. ನಿನ್ನೆ ನಡೆದ ಘಟನೆ […]

ಭಕ್ತನ ಮೇಲೆ ಹಲ್ಲೆ ಪ್ರಕರಣ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟ DC-SP
Edited By:

Updated on: Oct 17, 2020 | 4:11 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಗ್ರಾಮದಲ್ಲಿರುವ ಸುಪ್ರಸಿದ್ಧ ಚೌಡೇಶ್ವರಿ ದೇವಸ್ಥಾನದಲ್ಲಿ ನಿನ್ನೆ ಭಕ್ತನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಇಬ್ಬರೂ ದೇವಸ್ಥಾನಕ್ಕೆ ಭೇಟಿ ಕೊಟ್ಟರು.
ನಿನ್ನೆ ಮಧ್ಯಾಹ್ನ ದೇಗುಲದ ಪ್ರಧಾನ ಅರ್ಚಕರಾದ ಶೇಷಗಿರಿ ಭಟ್​ ಸಹೋದರನಿಂದ ಭಕ್ತನೊಬ್ಬನ ಮೇಲೆ ಹಲ್ಲೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ KB ಶಿವಕುಮಾರ್ ಹಾಗೂ SP ಕೆ.ಎಂ. ಶಾಂತರಾಜು ಭೇಟಿಕೊಟ್ಟರು. ನಿನ್ನೆ ನಡೆದ ಘಟನೆ ಕುರಿತು ದೇವಸ್ಥಾನದ ಆಡಳಿತ ಮಂಡಳಿಯಿಂದ ಇಬ್ಬರೂ ಅಧಿಕಾರಿಗಳು ಮಾಹಿತಿ ಕಲೆಹಾಕಿದರು.