ಜೈಲಿನಲ್ಲಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ: ಬಂಧನದ ಎಕ್ಸ್ಕ್ಲ್ಯೂಸೀವ್ ವಿಡಿಯೋ ಇಲ್ಲಿದೆ
ಇಂದು ನ್ಯಾಯಾಲಯದ ಕಲಾಪದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಪ್ರಕರಣದ 2ನೇ ಆರೋಪಿ ಹಾಸ್ಟೆಲ್ನ ವಾರ್ಡನ್ ರಶ್ಮಿಯ ವಿಚಾರಣೆ ಮುಂದುವರಿಯಲಿದೆ.
ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಅವರನ್ನು ಪೋಕ್ಸೋ ಕಾಯ್ದೆಯಡಿ (POCSO case) ಚಿತ್ರದುರ್ಗ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಶಿವಮೂರ್ತಿ ಸ್ವಾಮೀಜಿ ಬಂಧನ ಎಕ್ಸ್ಕ್ಲ್ಯೂಸೀವ್ ವಿಡಿಯೋ ಟಿವಿ9ಗೆ ಸಿಕ್ಕಿದೆ. ಎಫ್ಐಆರ್ ದಾಖಲಾದ 6 ದಿನಗಳ ಬಳಿಕ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದರು. 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶೆ ಹಾಗೂ ಮ್ಯಾಜಿಸ್ಟ್ರೇಟ್ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ಪೊಕ್ಸೊ ಕಾಯ್ದೆಯಡಿ (POCSO Act) ಪ್ರಕರಣ ದಾಖಲಾಗಿದ್ದು, ವಿಚಾರಣೆಗಾಗಿ ಮುರುಘಾ ಶರಣರನ್ನು 10 ದಿನಗಳ ಅವಧಿಗೆ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಪೊಲೀಸರು ನ್ಯಾಯಾಲಯಕ್ಕೆ ಶುಕ್ರವಾರ ಮನವಿ ಮಾಡುವ ಸಾಧ್ಯತೆಯಿದೆ.
ಇಂದು ಎಲ್ಲರ ಚಿತ್ತ ನ್ಯಾಯಾಲಯದ ಕಲಾಪದತ್ತ:
ಇಂದು ನ್ಯಾಯಾಲಯದ ಕಲಾಪದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಪ್ರಕರಣದ 2ನೇ ಆರೋಪಿ ಹಾಸ್ಟೆಲ್ನ ವಾರ್ಡನ್ ರಶ್ಮಿಯ ವಿಚಾರಣೆ ಮುಂದುವರಿಯಲಿದೆ. ಮಠದ ಆಡಳಿತಾಧಿಕಾರಿಯಾಗಿದ್ದ ಇಂದು ಮಧ್ಯಾಹ್ನದ ವೇಳೆ ರಶ್ಮಿ ಬಂಧನ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಪ್ರಕರಣದ ಇತರ ಮೂವರು ಆರೋಪಿಗಳ ಚಲನವಲನದ ಮೇಲೆ ಪೊಲೀಸರು ನಿಗಾ ಇರಿಸಿದ್ದು, ಯಾವಾಗ ಬೇಕಾದರೂ ಅವರ ಬಂಧನವಾಗಬಹುದು ಎಂದು ಹೇಳಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.