AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಮೈಸೂರು ಝೂಗೆ ಶಿವಣ್ಣ ಭೇಟಿ.. ಅಭಿಮಾನದಿಂದ ಎದೆಯುಬ್ಬಿಸಿದ ಫ್ಯಾನ್ಸ್

ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಫುಲ್ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿರುವ ಅಭಿಮಾನಿಗಳಂತೋ ಆಕಾಶದೆತ್ತರಕ್ಕೆ ಅಭಿಮಾನದಿಂದ ಹಾರಿದ್ದಾರೆ. ಕೊರೊನಾ ದಿಗ್ಬಂಧನದ ಭೀತಿಯಿಂದ ಸ್ವಲ್ಪಮಟ್ಟಿಗೆ ಮುಕ್ತರಾಗಿ ಜನ ಎಂದಿನಂತೆ ಜೀವನ ಸಾಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಇದ್ದರೂ ಹೊಟ್ಟೆ ತುಂಬಿಸಿಕೊಳ್ಳಲು ಹೋರಾಡಲೇ ಬೇಕು ಎಂದು ಮುಂಜಾಗ್ರತೆಯೊಂದಿಗೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಶಿವಣ್ಣ ಕೂಡ ಬಿಡುವು ಮಾಡಿಕೊಂಡು ಕುಟುಂಬ ಸಮೇತ […]

ಕುಟುಂಬ ಸಮೇತ ಮೈಸೂರು ಝೂಗೆ ಶಿವಣ್ಣ ಭೇಟಿ.. ಅಭಿಮಾನದಿಂದ ಎದೆಯುಬ್ಬಿಸಿದ ಫ್ಯಾನ್ಸ್
ಆಯೇಷಾ ಬಾನು
|

Updated on: Oct 01, 2020 | 3:20 PM

Share

ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಫುಲ್ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿರುವ ಅಭಿಮಾನಿಗಳಂತೋ ಆಕಾಶದೆತ್ತರಕ್ಕೆ ಅಭಿಮಾನದಿಂದ ಹಾರಿದ್ದಾರೆ.

ಕೊರೊನಾ ದಿಗ್ಬಂಧನದ ಭೀತಿಯಿಂದ ಸ್ವಲ್ಪಮಟ್ಟಿಗೆ ಮುಕ್ತರಾಗಿ ಜನ ಎಂದಿನಂತೆ ಜೀವನ ಸಾಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಇದ್ದರೂ ಹೊಟ್ಟೆ ತುಂಬಿಸಿಕೊಳ್ಳಲು ಹೋರಾಡಲೇ ಬೇಕು ಎಂದು ಮುಂಜಾಗ್ರತೆಯೊಂದಿಗೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಶಿವಣ್ಣ ಕೂಡ ಬಿಡುವು ಮಾಡಿಕೊಂಡು ಕುಟುಂಬ ಸಮೇತ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಳಿಯನ ಜೊತೆ ಮೃಗಾಲಯವೆಲ್ಲ ಸುತ್ತಾಡಿ ಎಂಜಾಯ್ ಮಾಡಿದ್ದಾರೆ.

ಹಾಗೂ ತಾವು ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿ ಖುಷಿ ಪಟ್ಟಿದ್ದಾರೆ. ಶಿವರಾಜ್ ಕುಮಾರ್ ಮೃಗಾಲಯದ ನಿರ್ವಹಣೆ ಕಾರ್ಯ ಹೇಗೆ ಸಾಗಿದೆ ಹಾಗೂ ಮೃಗಾಲಯದ ಬಗ್ಗೆ, ಪ್ರಾಣಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇಡೀ ಮೃಗಾಲಯ ಸುತ್ತಾಡಿ ಪ್ರಾಣಿಗಳ ಕಂಡು ಸಂತೋಷ ಪಟ್ಟಿದ್ದಾರೆ.

ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು: ಲಾಕ್​ಡೌನ್ ಮುಗಿದ ಮೇಲೆ ನಾನು ಮೊದಲ ಬಾರಿಗೆ ಬೆಂಗಳೂರು ಬಿಟ್ಟು ಹೊರಗೆ ಬಂದಿದ್ದೇನೆ. 6 ತಿಂಗಳ ನಂತರ ಮೊದಲು ಬಂದಿದ್ದೆ ಮೈಸೂರಿಗೆ. ಇಲ್ಲಿನ ಮೃಗಾಲಯ ನೋಡಿ ಖುಷಿಯಾಗಿದೆ. ಪ್ರಾಣಿಗಳನ್ನ ನೋಡಿದ ತಕ್ಷಣ ಎಂ.ಪಿ.ಶಂಕರ್ ನೆನಪಾದರು. ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು. ಮೃಗಾಲಯ್ಕೆ ಭೇಟಿ ಕೊಟ್ಟಿದ್ದು ಖುಷಿಯಾಯ್ತು ಎಂದು ಮೈಸೂರಿನಲ್ಲಿ ನಟ ಶಿವರಾಜ್‌ಕುಮಾರ್ ಸಂಸತ ಹಂಚಿಕೊಂಡಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ