
ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಫುಲ್ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿರುವ ಅಭಿಮಾನಿಗಳಂತೋ ಆಕಾಶದೆತ್ತರಕ್ಕೆ ಅಭಿಮಾನದಿಂದ ಹಾರಿದ್ದಾರೆ.
ಕೊರೊನಾ ದಿಗ್ಬಂಧನದ ಭೀತಿಯಿಂದ ಸ್ವಲ್ಪಮಟ್ಟಿಗೆ ಮುಕ್ತರಾಗಿ ಜನ ಎಂದಿನಂತೆ ಜೀವನ ಸಾಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಇದ್ದರೂ ಹೊಟ್ಟೆ ತುಂಬಿಸಿಕೊಳ್ಳಲು ಹೋರಾಡಲೇ ಬೇಕು ಎಂದು ಮುಂಜಾಗ್ರತೆಯೊಂದಿಗೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಶಿವಣ್ಣ ಕೂಡ ಬಿಡುವು ಮಾಡಿಕೊಂಡು ಕುಟುಂಬ ಸಮೇತ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಳಿಯನ ಜೊತೆ ಮೃಗಾಲಯವೆಲ್ಲ ಸುತ್ತಾಡಿ ಎಂಜಾಯ್ ಮಾಡಿದ್ದಾರೆ.
ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು:
ಲಾಕ್ಡೌನ್ ಮುಗಿದ ಮೇಲೆ ನಾನು ಮೊದಲ ಬಾರಿಗೆ ಬೆಂಗಳೂರು ಬಿಟ್ಟು ಹೊರಗೆ ಬಂದಿದ್ದೇನೆ. 6 ತಿಂಗಳ ನಂತರ ಮೊದಲು ಬಂದಿದ್ದೆ ಮೈಸೂರಿಗೆ. ಇಲ್ಲಿನ ಮೃಗಾಲಯ ನೋಡಿ ಖುಷಿಯಾಗಿದೆ. ಪ್ರಾಣಿಗಳನ್ನ ನೋಡಿದ ತಕ್ಷಣ ಎಂ.ಪಿ.ಶಂಕರ್ ನೆನಪಾದರು. ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು. ಮೃಗಾಲಯ್ಕೆ ಭೇಟಿ ಕೊಟ್ಟಿದ್ದು ಖುಷಿಯಾಯ್ತು ಎಂದು ಮೈಸೂರಿನಲ್ಲಿ ನಟ ಶಿವರಾಜ್‌ಕುಮಾರ್ ಸಂಸತ ಹಂಚಿಕೊಂಡಿದ್ದಾರೆ.