ಆಷಾಢ ಶುಕ್ರವಾರ: ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿದ್ದು ವಿವಾದಕ್ಕೆ ಗುರಿಯಾಯ್ತು
ಮೈಸೂರು: ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರವಾಗಿರೋ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಬೆಳ್ಳಂ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಬರಿಗಾಲಿನಲ್ಲಿ ತೆರಳಿದ್ದಾರೆ. 1001 ಮೆಟ್ಟಿಲುಗಳನ್ನ ಬರಿಗಾಲಿನಲ್ಲಿ ಹತ್ತಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆ ಇಂದು ವಿಶೇಷ ದಿನವಾದರಿಂದ ತಾಯಿಯ ದರ್ಶನಕ್ಕೆ ಜನ ಸಾಗರವೇ ಹರಿದು ಬರುತ್ತೆ. ಇದು ಸೋಂಕನ್ನು ಮತ್ತಷ್ಟು ಹೆಚ್ಚು ಮಾಡುತ್ತೆ ಎಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ ಮಾಡಲಾಗಿದೆ. ಪೊಲೀಸರು ಬೆಟ್ಟಕ್ಕೆ […]

ಮೈಸೂರು: ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರವಾಗಿರೋ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಬೆಳ್ಳಂ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಬರಿಗಾಲಿನಲ್ಲಿ ತೆರಳಿದ್ದಾರೆ. 1001 ಮೆಟ್ಟಿಲುಗಳನ್ನ ಬರಿಗಾಲಿನಲ್ಲಿ ಹತ್ತಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.
ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆ
ಇಂದು ವಿಶೇಷ ದಿನವಾದರಿಂದ ತಾಯಿಯ ದರ್ಶನಕ್ಕೆ ಜನ ಸಾಗರವೇ ಹರಿದು ಬರುತ್ತೆ. ಇದು ಸೋಂಕನ್ನು ಮತ್ತಷ್ಟು ಹೆಚ್ಚು ಮಾಡುತ್ತೆ ಎಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ ಮಾಡಲಾಗಿದೆ. ಪೊಲೀಸರು ಬೆಟ್ಟಕ್ಕೆ ತೆರಳುವ ಎಲ್ಲಾ ಮಾರ್ಗವನ್ನು ಮುಚ್ಚಿದ್ದಾರೆ. ಈ ವೇಳೆ ಮೈಸೂರು ಮಹಾನಗರ ಪಾಲಿಕೆ ಸದಸ್ಯೆ ಭಾಗ್ಯ ಮಾದೇಶ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ದೇವಿಯ ದರ್ಶನಕ್ಕೆ ಬಂದಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಹೋಗುವುದಕ್ಕೆ ನಿರ್ಬಂಧ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ಬಿಡಲು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ಜತೆ ಭಾಗ್ಯ, M.K.ಸೋಮಶೇಖರ್ ವಾಗ್ವಾದ ನಡೆಸಿದ್ದಾರೆ. ಪೊಲೀಸರು ತಾರತಮ್ಯ ಮಾಡುತ್ತಿರುವುದಾಗಿ ಆರೋಪ ಮಾಡಿದ್ದಾರೆ. ಇದಕ್ಕೂ ಮುನ್ನ ಚಾಮುಂಡಿಬೆಟ್ಟಕ್ಕೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದರು. ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆದಿದ್ದರು ಆದರೆ ಈಗ ಮಾತ್ರ ಯಾಕೆ ನಿರ್ಬಂಧ ಎಂದು ಆಕ್ರೋಶ ಹೊರ ಹಾಕಿದ್ದಾರೆ.


Published On - 8:47 am, Fri, 17 July 20




