ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು

|

Updated on: Jul 19, 2020 | 8:12 AM

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ […]

ಬಗೆಹರಿತಿಲ್ಲ ವೆಂಟಿಲೇಟರ್, ಬೆಡ್ ಸಮಸ್ಯೆ: ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳಿಂದ ದೂರು
Follow us on

ಬೆಂಗಳೂರು: ನಗರದಲ್ಲಿ ಕೊರೊನಾ ನಾಗಲೋಟ ಮುಂದುವರೆದಿದೆ. ಸೋಂಕಿತರಿಗೆ ವೆಂಟಿಲೇಟರ್ ಬೆಡ್ ಕೊಡಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ.

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಂದಿಸದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ. ವೆಂಟಿಲೇಟರ್ ಕೊಡಿಸುವುದಕ್ಕೆ BBMP ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳು ಸ್ಪಂದಿಸುತ್ತಿಲ್ಲವೆಂದು ಹಿರಿಯ ಅಧಿಕಾರಿಗಳಿಗೆ ವಲಯ ಅಧಿಕಾರಿಗಳು ದೂರು ನೀಡಿದ್ದಾರೆ. ಬಿಬಿಎಂಪಿ ವಲಯ ಅಧಿಕಾರಿಗಳಿಂದ ಖಾಸಗಿ ಆಸ್ಪತ್ರೆಗೆ ಕರೆ ಮಾಡಿದಾಗ ವೆಂಟಿಲೇಟರ್ ಇದೆ ಎಂದು ಮಾಹಿತಿ ನೀಡಿ ಬಳಿಕ ಖಾಸಗಿ ಆಸ್ಪತ್ರೆಗೆ ಹೋದರೆ ವೆಂಟಿಲೇಟರ್ ಇಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಉತ್ತರಿಸುತ್ತಿದ್ದಾರೆ.

ವಿವಿಧ ಕಾರಣ ನೀಡಿ ರೋಗಿಯನ್ನು ವಾಪಸ್ ಕಳಿಸ್ತಿದ್ದಾರೆ. ಹೀಗಾಗಿ ಈ ಬಗ್ಗೆ ಬಿಬಿಎಂಪಿ ವಲಯ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಲ್ಲದೆ ಕೊರೊನಾ ಸೋಂಕಿತರು ವೆಂಟಿಲೇಟರ್‌ಗಳಿಗಾಗಿ 2-3 ದಿನ ಕಾಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಬಿಬಿಎಂಪಿ ಹಿರಿಯ ಅಧಿಕಾರಿಗಳ ಬಳಿ ವೆಂಟಿಲೇಟರ್‌ಗಳಿಗೆ ವಲಯ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ.