AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreya Ghoshal | ತಾಯಿ ಆಗಲಿದ್ದಾರೆ ಶ್ರೇಯಾ ಘೋಶಾಲ್​: ವೈರಲ್​ ಆಯ್ತು ಗಾಯಕಿಯ ಹೊಸ ಫೋಟೋ

ಹಿನ್ನೆಲೆ ಗಾಯಕಿ ಶ್ರೇಯಾ , ಶಿಲಾದಿತ್ಯ ಅವರನ್ನು 2015 ಫೆಬ್ರವರಿ 5ರಂದು ಮದುವೆ ಆಗಿದ್ದರು. ಈ ಮೂಲಕ ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ ನೀಡಿದ್ದರು.

Shreya Ghoshal | ತಾಯಿ ಆಗಲಿದ್ದಾರೆ ಶ್ರೇಯಾ ಘೋಶಾಲ್​: ವೈರಲ್​ ಆಯ್ತು ಗಾಯಕಿಯ ಹೊಸ ಫೋಟೋ
ಶ್ರೇಯಾ ಘೋಶಾಲ್
ರಾಜೇಶ್ ದುಗ್ಗುಮನೆ
| Edited By: |

Updated on:Mar 04, 2021 | 3:27 PM

Share

ಮಧುರ ಕಂಠದ ಮೂಲಕ ಗಮನ ಸೆಳೆದಿರುವ ಗಾಯಕಿ ಶ್ರೇಯಾ ಘೋಶಾಲ್​ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅವರು ಶೀಘ್ರವೇ ತಾಯಿ ಆಗುವ ಬಗ್ಗೆ ಬರೆದುಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಯಾಗಿದ್ದು, ಅಭಿನಂದನೆ ತಿಳಿಸಿದ್ದಾರೆ. ಶ್ರೇಯಾ ಘೋಶಾಲ್​ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದನ್ನು ಹಾಕಿಕೊಂಡಿದ್ದಾರೆ. ಶ್ರೇಯಾ ಹೊಟ್ಟೆ ಉಬ್ಬಿರುವುದು ಫೋಟೋದಲ್ಲಿ ಕಾಣುತ್ತದೆ. ಇದಕ್ಕೆ ಅಡಿಬರಹ ನೀಡಿರುವ ಅವರು, ಬೇಬಿ ಶ್ರೇಯಾದಿತ್ಯ ಶೀಘ್ರವೇ ಬರಲಿದ್ದಾರೆ. ಈ ಸುದ್ದಿಯನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಶಿಲಾದಿತ್ಯ ಮತ್ತು ನಾನು ಸಂತೋಷಗೊಂಡಿದ್ದೇವೆ. ನಮ್ಮ ಜೀವನದಲ್ಲಿ ಈ ಹೊಸ ಅಧ್ಯಾಯಕ್ಕೆ ನಾವು ಸಿದ್ಧರಾಗಿದ್ದೇವೆ. ಇದಕ್ಕೆ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದಗಳು ಬೇಕು ಎಂದು ಬರೆದುಕೊಂಡಿದ್ದಾರೆ. ಈ ಫೋಟೋವನ್ನು ನೋಡಿದ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಶ್ರೇಯಾಗೆ ಅಭಿನಂದನೆಗಳ ಸುರಿಮಳೆಗೈದಿದ್ದಾರೆ.

View this post on Instagram

A post shared by Shiladitya M (@shiladitya)

ಹಿನ್ನೆಲೆ ಗಾಯಕಿ ಶ್ರೇಯಾ , ಶಿಲಾದಿತ್ಯ ಅವರನ್ನು 2015 ಫೆಬ್ರವರಿ 5ರಂದು ಮದುವೆ ಆಗಿದ್ದರು. ಈ ಮೂಲಕ ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ ನೀಡಿದ್ದರು.

ಶ್ರೇಯಾ ಹಿಂದಿ ಮಾತ್ರವಲ್ಲದೆ, ಕನ್ನಡದಲ್ಲೂ ಸಾಕಷ್ಟು ಹಾಡುಗಳನ್ನು ಹಾಡಿದ್ದಾರೆ. ಮೊಗ್ಗಿನ ಮನಸಲಿ…, ಉಲ್ಲಾಸದ ಹೂಮಳೆ…, ಮಳೆ ಬರುವ ಹಾಗಿದೆ… ಪೋಲಿ ಇವನು.. ಸೇರಿ ಸಾಕಷ್ಟು ಹಾಡುಗಳು ಶ್ರೇಯಾ ಕಂಠದಿಂದ ಮೂಡಿ ಬಂದಿದೆ.

ಇದನ್ನೂ ಓದಿ: Chandan Shetty | ಕನ್ನಡ ಹಾಡು ಹಾಕಲ್ಲ ಎಂದಿದ್ದಕ್ಕೆ ಆಕ್ರೋಶ: ಪಬ್​ಗಳ ವಿರುದ್ಧ ಮತ್ತೆ ಸಿಡಿದೆದ್ದ ಚಂದನ್ ಶೆಟ್ಟಿ!

Published On - 3:26 pm, Thu, 4 March 21

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು