ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳ 114ನೇ ಜನ್ಮಜಯಂತಿ: ಮಠದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ

ಮಠದಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜಾ ಕಾರ್ಯಕ್ರಮ ನಡೆಯುತ್ತಿದ್ದು, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೆರಿಸಲಾಗುತ್ತಿದೆ.

ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳ 114ನೇ ಜನ್ಮಜಯಂತಿ: ಮಠದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ
ಡಾ.ಶಿವಕುಮಾರ ಸ್ವಾಮೀಜಿಗಳ 114ನೇ ಜನ್ಮಜಯಂತಿ
Follow us
|

Updated on: Apr 01, 2021 | 7:50 AM

ತುಮಕೂರು: ಕಾಯಕ ಯೋಗಿ.. ಭಕ್ತರ ಪಾಲಿನ ಭಗವಂತ. ಅದೆಷ್ಟೋ ಜನರ ಬದುಕಿನ ದಾರಿ ದೀಪ.. ಅರಿವಿನ ಜ್ಯೋತಿ ಬೆಳಗಿಸಿದ ಪರಮ ಗುರು. ಅದೆಷ್ಟೋ ಮಕ್ಕಳ ಭವಿಷ್ಯ ರೂಪಿದ ದೇವರು. ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಸ್ವಾಮೀಜಿಗಳ 114ನೇ ಜನ್ಮಜಯಂತಿ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಆಯೋಜಿಸಲಾಗಿದೆ.

ಮಠದಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜಾ ಕಾರ್ಯಕ್ರಮ ನಡೆಯುತ್ತಿದ್ದು, ರುದ್ರಾಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯ ನೆರವೆರಿಸಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ಮಹಾಮಾರಿಯ ಉಪಟಳ ಹೆಚ್ಚಾಗಿರುವ ಕಾರಣದಿಂದಾಗಿ ಸರಳವಾಗಿ ಜನ್ಮಜಯಂತಿಯನ್ನು ಆಚರಿಸಲಾಗುತ್ತಿದೆ.

ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ.. ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. 12ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ ಕಾಯಕವೇ ಕೈಲಾಸ ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು. ಮಾರ್ಚ್ 3, 1960ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದರು.

ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿದ್ದರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದರು.