ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 65 ವರ್ಷದ ಶ್ರೀಗಳು ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಸಹ ಆಗಿದ್ದರು. ಸ್ವಾಮೀಜಿಯವರು ಕಿಡ್ನಿ ಸಮಸ್ಯೆ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಗೋಡೆಕೆರೆಯ ಮೂಲ ಮಠದಲ್ಲಿ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಶ್ರೀಗಳು ವಿಧಿವಶರಾಗಿದ್ದಾರೆ ಎಂದು ಹೇಳಲಾಗಿದೆ. ಗೋಡೆಕೆರೆ ಗ್ರಾಮದಲ್ಲಿ ನಾಳೆ ಶ್ರೀಗಳ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಶ್ರೀಗಳ ನಿಧನಕ್ಕೆ ಗಣ್ಯರು ಹಾಗೂ ಭಕ್ತಾದಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಸಂಸ್ಥಾನ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 65 ವರ್ಷದ ಶ್ರೀಗಳು ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಸಹ ಆಗಿದ್ದರು.
ಸ್ವಾಮೀಜಿಯವರು ಕಿಡ್ನಿ ಸಮಸ್ಯೆ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಗೋಡೆಕೆರೆಯ ಮೂಲ ಮಠದಲ್ಲಿ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಶ್ರೀಗಳು ವಿಧಿವಶರಾಗಿದ್ದಾರೆ ಎಂದು ಹೇಳಲಾಗಿದೆ. ಗೋಡೆಕೆರೆ ಗ್ರಾಮದಲ್ಲಿ ನಾಳೆ ಶ್ರೀಗಳ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಶ್ರೀಗಳ ನಿಧನಕ್ಕೆ ಗಣ್ಯರು ಹಾಗೂ ಭಕ್ತಾದಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.