Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಪೊಲೀಸ್ ಸಂಸ್ಮರಣಾ ದಿನ, ಪ್ರಾಣತ್ಯಾಗ ಮಾಡಿದ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿದ ಸಿದ್ದರಾಮಯ್ಯ ಮತ್ತು ಪರಮೇಶ್ವರ್

ಇಂದು ಪೊಲೀಸ್ ಸಂಸ್ಮರಣಾ ದಿನ, ಪ್ರಾಣತ್ಯಾಗ ಮಾಡಿದ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿದ ಸಿದ್ದರಾಮಯ್ಯ ಮತ್ತು ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 21, 2023 | 10:53 AM

64 ವರ್ಷಗಳ ಹಿಂದೆ ಇದೇ ದಿನದಂದು (ಅಕ್ಟೋಬರ್ 21, 1959) ಚೀನಾದೊಂದಿಗಿನ ಭಾರತದ ಗಡಿಭಾಗದಲ್ಲಿ ಕರ್ತವ್ಯನಿರತರಾಗಿದ್ದ ಕೇಂದ್ರ ಸಶಸ್ತ್ರ ಮೀಸಲು ಪಡೆಯ 10 ಪೊಲೀಸರು ಚೀನಾದ ಸೇನೆ ನಡೆಸಿದ ದಾಳಿಗೆ ಬಲಿಯಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ಅಕ್ಟೋಬರ್ 21 ರಂದು ಪೊಲೀಸ್ ಸಂಸ್ಮರಣಾ ದಿನವನ್ನು ದೇಶದಾದ್ಯಾಂತ ಆಚರಿಸಲಾಗುತ್ತದೆ.

ಬೆಂಗಳೂರು:  ಸೈನಿಕರು ದೇಶದ ರಕ್ಷಣೆಗಾಗಿ ಪ್ರಾಣವನ್ನೂ ಬಲಿದಾನ ಮಾಡಿ ಹುತಾತ್ಮರೆನಿಸಿಕೊಳ್ಳುತ್ತಾರೆ (martyrs), ನಮ್ಮ ದೇಶದ ಪೊಲೀಸರು-ಅವರು ಯಾವುದೇ ರಾಜ್ಯದವರಾಲೀ; ಕರ್ತವ್ಯನಿತರಾಗಿದ್ದಾಗ ಪ್ರಾಣವನ್ನು ಅಪಾಯಕ್ಕೊಡ್ಡಿ ವೀರಮರಣ ಹೊಂದುವುದು ಸಹ ಅಷ್ಟೇ ಮಹತ್ವದೆನಿಸಿಕೊಳ್ಳುತ್ತದೆ. ಈ ಬಲಿದಾನಗಳನ್ನು ನಾವು ಬೇರೆ ಬೇರೆ ಹೆಸರುಗಳಲ್ಲಿ ಆಚರಿಸುವುದಷ್ಟೇ ವ್ಯತ್ಯಾಸ. ಸೈನಿಕರ ಬಲಿದಾನವನ್ನು ಹುತಾತ್ಮರ ದಿನವನ್ನಾಗಿ ಆಚರಿಸಿದರೆ ಪೊಲೀಸರ ಪ್ರಾಣತ್ಯಾಗವನ್ನು ಪೊಲೀಸ್ ಸಂಸ್ಮರಣಾ ದಿನವಾಗಿ ಅಚರಿಸುತ್ತೇವೆ ಇವತ್ತು ಪೊಲೀಸ್ ಸಂಸ್ಮರಣಾ ದಿನ. ನಿಮಗೆ ಗೊತ್ತಿರಬಹುದು, 64 ವರ್ಷಗಳ ಹಿಂದೆ ಇದೇ ದಿನದಂದು (ಅಕ್ಟೋಬರ್ 21, 1959) ಚೀನಾದೊಂದಿಗಿನ ಭಾರತದ ಗಡಿಭಾಗದಲ್ಲಿ ಕರ್ತವ್ಯನಿರತರಾಗಿದ್ದ ಕೇಂದ್ರ ಸಶಸ್ತ್ರ ಮೀಸಲು (CRPF) ಪಡೆಯ 10 ಪೊಲೀಸರು ಚೀನಾದ ಸೇನೆ ನಡೆಸಿದ ದಾಳಿಗೆ ಬಲಿಯಾಗಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ಅಕ್ಟೋಬರ್ 21 ರಂದು ಪೊಲೀಸ್ ಸಂಸ್ಮರಣಾ ದಿನವನ್ನು ದೇಶದಾದ್ಯಾಂತ ಆಚರಿಸಲಾಗುತ್ತದೆ. ಬೆಂಗಳೂರಿನ ಮೈಸೂರರು ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿ ಜಾರಿಯಲ್ಲಿರುವ ಪೊಲೀಸ್ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಗೃಹಸಚಿವ ಜಿ ಪರಮೇಶ್ವರ್ (G Parameshwar) ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ