‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’.. ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ತೂರಿ ಪ್ರಾರ್ಥನೆ

ಜಾತ್ರಾಮಹೋತ್ಸವದಲ್ಲಿ ರಥೋತ್ಸವಕ್ಕೆ ಬಯಕೆ ಈಡೇರಲೆಂದು ಹಣ್ಣು ಜವಣೆ ಎಸೆಯುವ ಪದ್ದತಿ ಇದೆ. ಈ ವೇಳೆ ಕಾಡುವಡ್ಡರಗುಡಿ ಗ್ರಾಮದ ಯುವಕ ಶರತ್ ಹರಕೆ ಹೊತ್ತಿದ್ದು ಶರತ್ ಬಾಳೆಹಣ್ಣಿನ ಮೇಲೆ ಬರೆದಿರುವ ಬೇಡಿಕೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’.. ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ತೂರಿ ಪ್ರಾರ್ಥನೆ
ಬಾಳೆಹಣ್ಣಿನ ಮೇಲೆ ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಬರೆದು ರಥದ ಮೇಲೆ ತೂರಿದ ಅಭಿಮಾನಿ
Follow us
ಆಯೇಷಾ ಬಾನು
| Updated By: Team Veegam

Updated on:Mar 24, 2021 | 1:55 PM

ಮೈಸೂರು: ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಆಗಬೇಕು ಎಂದು ಬಾಳೆಹಣ್ಣಿನ ಮೇಲೆ ಬರೆದು ದೇವರ ಮೇಲೆ ಎಸೆದು ಬೇಡಿಕೆ ಇಟ್ಟಿರುವ ಘಟನೆಯೊಂದು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗದ್ದಿಗೆ ಗ್ರಾಮದಲ್ಲಿ ನಡೆದಿದೆ. ಕಾಡುವಡ್ಡರಗುಡಿಯ ಯುವಕನೋರ್ವ ಮುಂದಿನ ಸಿಎಂ ಸಿದ್ದರಾಮಯ್ಯ, ಮತ್ತೊಮ್ಮೆ ಸಿಎಂ ಆಗಲೆಂದು ದೇವರಲ್ಲಿ ಬೇಡಿಕೆ ಇಟ್ಟಿದ್ದಾನೆ. ಗದ್ದಿಗೆ ಗ್ರಾಮದ ಕೆಂಡಗಣ್ಣ ಸ್ವಾಮಿ ಜಾತ್ರಾಮಹೋತ್ಸವದಲ್ಲಿ ಹರಕೆ ಹೊತ್ತು ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಆಗಬೇಕು ಎಂದು ಬಾಳೆಹಣ್ಣಿನ ಮೇಲೆ ಬರೆದು ದೇವರ ಮೇಲೆ ಎಸೆದಿದ್ದಾನೆ.

ಜಾತ್ರಾಮಹೋತ್ಸವದಲ್ಲಿ ರಥೋತ್ಸವಕ್ಕೆ ಬಯಕೆ ಈಡೇರಲೆಂದು ಹಣ್ಣು ಜವಣೆ ಎಸೆಯುವ ಪದ್ದತಿ ಇದೆ. ಈ ವೇಳೆ ಕಾಡುವಡ್ಡರಗುಡಿ ಗ್ರಾಮದ ಯುವಕ ಶರತ್ ಹರಕೆ ಹೊತ್ತಿದ್ದು ಶರತ್ ಬಾಳೆಹಣ್ಣಿನ ಮೇಲೆ ಬರೆದಿರುವ ಬೇಡಿಕೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮೂರು ದಿನಗಳ ಕಾಲ ಕೆಂಡಗಣ್ಣ ಸ್ವಾಮಿ ಜಾತ್ರಾಮಹೋತ್ಸವ ನಡೆಯುತ್ತದೆ. ಈ ಜಾತ್ರೆ ಮೂಲಕ ಇನ್ನೊಮ್ಮೆ ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಯುವಕ ದೇವರಿಗೆ ಪ್ರಾರ್ಥನೆ ಮಾಡಿಕೊಂಡಿದ್ದಾನೆ. ಐದು ವರ್ಷಗಳು ಉತ್ತಮ ಯೋಜನೆ ಹಲವು ಭಾಗ್ಯಗಳನ್ನು ನೀಡಿರುವ ಸಿದ್ದರಾಮಯ್ಯರೇ ರಾಜ್ಯಕ್ಕೆ ಸೂಕ್ತ. ಬಿಜೆಪಿ ಸರ್ಕಾರದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಈ ಹಿನ್ನೆಲೆ ಉತ್ತಮ ಆಡಳಿತ ನೀಡಲು ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗಬೇಕು ಎಂದು ಶರತ್ ಹೇಳಿಕೊಂಡಿದ್ದಾರೆ.

ಇದೇ ರೀತಿ ‘ಈ ಸಲ ಕಪ್ ನಮ್ದೆ, ಜೈ RCB’ ಎಂದು ಬಾಳೆ ಹಣ್ಣು ಎಸೆದಿದ್ದ ಫ್ಯಾನ್ ಕೆಲ ದಿನಗಳ ಹಿಂದೆ ಇದೇ ರೀತಿ ಆರ್​ಸಿಬಿ ಅಭಿಮಾನಿ ಬಾಳೆ ಹಣ್ಣು ಎಸೆದು ಹರಕೆ ಕಟ್ಟಿದ್ದ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ತೇರುಮಲ್ಲೇಶ್ವರ ರಥೋತ್ಸವದಲ್ಲಿ RCB ಫ್ಯಾನ್ಸ್ RCB ಗೆಲುವಿಗಾಗಿ ರಥದ ಮೇಲೆ ಬಾಳೆಹಣ್ಣು ತೂರಿದ್ದರು. ಬಾಳೆ ಹಣ್ಣಿನ ಮೇಲೆ ‘ಈ ಸಲ ಕಪ್ ನಮ್ದೆ, ಜೈ RCB’ ಎಂದು ಬರೆಯಲಾಗಿತ್ತು. ಈ ರೀತಿ ಬರೆದ ಬಾಳೆಹಣ್ಣಿನ ಜೊತೆಗೆ ಹತ್ತು ರೂಪಾಯಿ ಹಣ ಇಟ್ಟು ಎರಡೂ ಕೈಗಳಿಂದ ತೇರಿಗೆ ನಮಿಸಿ, RCB ಗೆಲುವಿಗೆ ಪ್ರಾರ್ಥಿಸಿ ಬಾಳೆಹಣ್ಣನ್ನು ತೇರಿನ ಮೇಲೆ ಎಸೆಯಲಾಗಿತ್ತು.

kendaganna swamy rathotsava

ಶರತ್

ಇದನ್ನೂ ಓದಿ: ‘ಈ ಸಲ ಕಪ್ ನಮ್ದೆ’ ರಥದ ಮೇಲೆ ಬಾಳೆಹಣ್ಣು ತೂರಿ ಅಭಿಮಾನಿ ಪ್ರಾರ್ಥನೆ

Published On - 9:29 am, Wed, 24 March 21

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ