AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರಗೆ ರಾಜಕೀಯ ದ್ವೇಷ: ಸಮಾವೇಶದಲ್ಲಿ ‘ಟಗರು’ಗಳ ಸಮಾಗಮ

ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಅಕ್ಕಪಕ್ಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಕುಳಿತಿದ್ದರು. ಮೂವರು ಅತ್ಯಂತ ಆತ್ಮೀಯವಾಗಿ ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. ಈ ವೇಳೆ ತಮಗೆ ನೀಡಿದ ಬಿಸ್ಕೆಟ್‌ ಅನ್ನು ಈಶ್ವರಪ್ಪ, ವಿಶ್ವನಾಥ್​ಗೂ ಸಿದ್ದರಾಮಯ್ಯ ನೀಡಿದರು. ರಾಯಣ್ಣ ಪ್ರತಿಮೆ ಅನಾವರಣ ನಂತರ ಸಿದ್ದರಾಮಯ್ಯ, ಈಶ್ವರಪ್ಪ ಒಂದೇ ಕಾರಿನಲ್ಲಿ […]

ಹೊರಗೆ ರಾಜಕೀಯ ದ್ವೇಷ: ಸಮಾವೇಶದಲ್ಲಿ ‘ಟಗರು’ಗಳ ಸಮಾಗಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 19, 2020 | 3:46 PM

Share

ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ.

ಸಿದ್ದರಾಮಯ್ಯ ಅಕ್ಕಪಕ್ಕ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಹೆಚ್​.ವಿಶ್ವನಾಥ್ ಕುಳಿತಿದ್ದರು. ಮೂವರು ಅತ್ಯಂತ ಆತ್ಮೀಯವಾಗಿ ಕಾರ್ಯಕ್ರದ ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. ಈ ವೇಳೆ ತಮಗೆ ನೀಡಿದ ಬಿಸ್ಕೆಟ್‌ ಅನ್ನು ಈಶ್ವರಪ್ಪ, ವಿಶ್ವನಾಥ್​ಗೂ ಸಿದ್ದರಾಮಯ್ಯ ನೀಡಿದರು. ರಾಯಣ್ಣ ಪ್ರತಿಮೆ ಅನಾವರಣ ನಂತರ ಸಿದ್ದರಾಮಯ್ಯ, ಈಶ್ವರಪ್ಪ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಇವರು ಕಾರ್ಯಕ್ರಮಕ್ಕೂ ಸಹ ಒಂದೇ ಕಾರಿನಲ್ಲಿ ಆಗಮಿಸಿದ್ದರು.

ಸಿದ್ದರಾಮಯ್ಯಗೆ ಸೆಲ್ಫಿ ಕಾಟ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಜೊತೆ ಸೆಲ್ಫಿಗಾಗಿ ಸುಮಾರು 20ಕ್ಕೂ ಹೆಚ್ಚು ಯುವತಿಯರು ಮುಗಿಬಿದ್ದಿದ್ದಾರೆ. ಈ ವೇಳೆ ಅಭಿಮಾನಿಗಳ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಸೆಲ್ಫಿಗೆ ಸಖತ್ ಪೋಸ್ ನೀಡಿದ್ದಾರೆ.

https://www.facebook.com/Tv9Kannada/videos/173989417003008/

Published On - 3:45 pm, Sun, 19 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು