ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ

ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: sandhya thejappa

Updated on:Jun 05, 2022 | 12:24 PM

ಬೆಂಗಳೂರು: ರಾಜ್ಯದಲ್ಲಿ ಪಠ್ಯಪರಿಷ್ಕರಣೆ ವಿವಾದ ಹೆಚ್ಚಾಗುತ್ತಿದೆ. ಸಾಹಿತಿಗಳು, ವಿದ್ಯಾರ್ಥಿಗಳು ಸೇರಿ ವಿರೋಧ ಪಕ್ಷಗಳು ಕೂಡಾ ಸರ್ಕಾರದ (Karnataka Government) ವಿರುದ್ಧ ಧ್ವನಿ ಎತ್ತಿವೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಬಿಸಿ ನಾಗೇಶ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ
Image
World Environment Day: ಮಣ್ಣಿನ ಫಲವತ್ತತೆ ಕಾಪಾಡಲು ಈ 5 ವಿಷಯಗಳಿಗೆ ಒತ್ತು ನೀಡುವಂತೆ ಮೋದಿ ಕರೆ
Image
ಸ್ಟಾರ್​ ನಟನ ರೀತಿ ತಲೆ ಎತ್ತಿದೆ ಚಾರ್ಲಿ ಶ್ವಾನದ ಕಟೌಟ್​; ರಕ್ಷಿತ್​ ಶೆಟ್ಟಿ ಸಿನಿಮಾಗೆ ಭರ್ಜರಿ ಪ್ರಚಾರ
Image
ಆರ್​ಎಸ್​ಎಸ್ ​ಬಗ್ಗೆ ಮಾತನಾಡುವ ಕಾಂಗ್ರೆಸ್​​ನವರಿಗೆ ಬುದ್ಧಿಭ್ರಮಣೆ ಆಗಿದೆ: ಸಚಿವ ಭೈರತಿ ಬಸವರಾಜ್
Image
Deepak Chahar: ದೀಪಕ್ ಚಹರ್ ಮದುವೆಯಲ್ಲಿ ಪಾಕಿಸ್ತಾನ ಸ್ಟಾರ್ ಕ್ರಿಕೆಟಿಗ?: ವೈರಲ್ ಆಗುತ್ತಿದೆ ಫೋಟೋ

ಇದನ್ನೂ ಓದಿ: ಆರ್​ಎಸ್​ಎಸ್ ​ಬಗ್ಗೆ ಮಾತನಾಡುವ ಕಾಂಗ್ರೆಸ್​​ನವರಿಗೆ ಬುದ್ಧಿಭ್ರಮಣೆ ಆಗಿದೆ: ಸಚಿವ ಭೈರತಿ ಬಸವರಾಜ್

ಪಠ್ಯಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲ ಎಂದು ಟ್ವೋಟ್ ಮಾಡಿರುವ ಅವರು, ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಎಂದು ಕೇಳಿದ್ದಾರೆ.

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತಾ? ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತಾ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Sun, 5 June 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ