ಸುಧಾಕರ್​ ‘ಏಕಪತ್ನೀವ್ರತಸ್ಥ’ ಹೇಳಿಕೆಗೆ ರೇಣುಕಾಚಾರ್ಯ, ರಮೇಶ್​ಕುಮಾರ್ ಸೇರಿ ವಿವಿಧ ನಾಯಕರ ತೀವ್ರ ಆಕ್ಷೇಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಆದರೆ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ತೇಜಸ್ವಿನಿ ಗೌಡ, ಮಾಜಿ ಸ್ಪೀಕರ್ ರಮೇಶ್​ಕುಮಾರ್ ಸಹ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ಸುಧಾಕರ್​ ‘ಏಕಪತ್ನೀವ್ರತಸ್ಥ’ ಹೇಳಿಕೆಗೆ ರೇಣುಕಾಚಾರ್ಯ, ರಮೇಶ್​ಕುಮಾರ್ ಸೇರಿ ವಿವಿಧ ನಾಯಕರ ತೀವ್ರ ಆಕ್ಷೇಪ
ಸಿದ್ದರಾಮಯ್ಯ, ಸುಧಾಕರ್ ಮತ್ತು ರಮೇಶ್​ಕುಮಾರ್
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 24, 2021 | 7:50 PM

ಬೆಂಗಳೂರು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೀಡಿರುವ ‘ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ’ ಎಂಬ ಸಚಿವ ಡಾ.ಕೆ.ಸುಧಾಕರ್ ಅವರ ಹೇಳಿಕೆಗೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಆದರೆ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ತೇಜಸ್ವಿನಿ ಗೌಡ, ಮಾಜಿ ಸ್ಪೀಕರ್ ರಮೇಶ್​ಕುಮಾರ್ ಸಹ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ವಿಧಾನಸೌಧದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸಚಿವ ಸುಧಾಕರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಕೋರಿದಾಗ ಅವರು ಸ್ಪಷ್ಟವಾಗಿ ನಿರಾಕರಿಸಿದರು. ಯಾವುದೇ ಪ್ರತಿಕ್ರಿಯೆ ನೀಡದೆ ವಿಧಾನಸೌಧದಿಂದ ಹೊರನಡೆದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಸಚಿವ ಡಾ.ಕೆ.ಸುಧಾಕರ್​ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ ಸಚಿವರ ಹೇಳಿಕೆ ತಪ್ಪು. ಇದು ಮೂರ್ಖತನದ ಪರಮಾವಧಿ. ಎಲ್ಲಾ 224 ಶಾಸಕರಲ್ಲಿ ಡಾ.ಸುಧಾಕರ್​ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಸುಧಾಕರ್​ ಹೇಳಿಕೆಯಿಂದ ಶಾಸಕಿಯರು ಕಣ್ಣೀರು ಹಾಕುತ್ತಿದ್ದಾರೆ. ನಾಳೆ ಶಾಸಕಿಯರ ಕುಟುಂಬದವರು ಹೇಗೆ ಸದನಕ್ಕೆ ಕಳಿಸುತ್ತಾರೆ? ಸುಧಾಕರ್ ಅವರೇ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಸುಧಾಕರ್ ಅವರ ರಾಜೀನಾಮೆ ಪಡೆಯುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅವರಿಗೆ ಬಿಟ್ಟ ವಿಚಾರ ಎಂದು ರೇಣುಕಾಚಾರ್ಯ ಹೇಳಿದರು.

ಬಿಜೆಪಿ ನಾಯಕಿ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಇಲ್ಲಿರುವ ಸದಸ್ಯರ ಪತ್ನಿಯರು ಬಂದು ಗ್ಯಾಲರಿಯಲ್ಲಿ ಕುಳಿತುಕೊಳ್ಳಲಿ. ಆಗ ನಾನು ಚರ್ಚೆಯಲ್ಲಿ ಭಾಗಿಯಾಗ್ತೇನೆ ಎಂದರು. ಪ್ರತಿಪಕ್ಷಗಳು ಸದನದಲ್ಲಿ ಗದ್ದಲ ಎಬ್ಬಿಸಿದಾಗ ತೇಜಸ್ವಿನಿ ಗೌಡ ಮೇಲಿನಂತೆ ಹೇಳಿಕೆ ನೀಡಿದರು.

ಶ್ರೀರಾಮನ ಮೇಲೆ ನಂಬಿಕೆಯಿದ್ರೆ ರಾಜೀನಾಮೆ ಕೊಡಿ ಸಚಿವ ಸುಧಾಕರ್ ಟ್ವೀಟ್​ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಹೆಗಲು ಮುಟ್ಟಿಕೊಂಡು ತಡೆಯಾಜ್ಞೆ ತರುವ ಮೂಲಕ ನೀವು ಏಕಪತ್ನಿ ವ್ರತಸ್ಥರಲ್ಲವೆಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದೀರಿ. ನಿಮಗೆ ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ರಾಜೀನಾಮೆ ನೀಡಿ, ಕಳಂಕ ತೊಳೆದುಕೊಂಡು ಬನ್ನಿ. ಕಂಡವರ ಹೆಂಡತಿಯರ ಲೆಕ್ಕ ಹಾಕುವ ಮೊದಲು ರಾಜ್ಯದಲ್ಲಿ ಏರುತ್ತಿರುವ ಕೊರೊನಾ ಕೇಸ್‌ಗಳ ಲೆಕ್ಕ ಗಮನಿಸಿ’ ಎಂದು ತಿವಿದಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಂತೂ ಮುಂಜಾನೆಯಿಂದಲೂ ಸುಧಾಕರ್ ಹೇಳಿಕೆ ಬಗ್ಗೆ ಹಲವು ಬಾರಿ ಪ್ರತಿಕ್ರಿಯಿಸಿದ್ದಾರೆ. ‘ಇಲ್ಲಿ ಎಲ್ರೂ ಏಕಪತ್ನಿ ವ್ರತಸ್ಥರೇ. ಹಿಂದೂ ವಿವಾಹ ಕಾಯ್ದೆಯಡಿ ಮೊದಲ ಹೆಂಡತಿ ಇರುವಾಗ ಇನ್ನೊಂದು ಮದುವೆಗೆ ಅವಕಾಶವಿಲ್ಲ’ ಎಂದು ಹೇಳಿದರು.

ಸಿಎಂ, ಸ್ಪೀಕರ್ ಸಹ ಸುಧಾಕರ್ ಹೇಳಿಕೆಯ ವ್ಯಾಪ್ತಿಗೆ ಬರ್ತಾರೆ ಸುಧಾಕರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಸ್ಪೀಕರ್ ರಮೇಶ್​ ಕುಮಾರ್, ‘ಡಾ.ಸುಧಾಕರ್ ಮಾನಸಿಕ ಸಮತೋಲನ ತಪ್ಪಿದಂತೆ ಕಾಣುತ್ತೆ. 225 ಜನ ಸೇರಿಸಿ ಎಲ್ಲರ ಬಗ್ಗೆಯೂ ಮಾತನಾಡಿದ್ದಾರೆ. ಹೀಗಂದ್ರೆ, ಸದನದಲ್ಲಿ ಮಹಿಳಾ ಶಾಸಕರಿಲ್ವಾ? ಸ್ಪೀಕರ್ ಸದನದ ಶಾಸಕರಲ್ವಾ? ಸಿಎಂ ಅವರ ನಾಯಕರಲ್ವಾ? ಆತ ಏನು ಮಾತನಾಡುತ್ತಿದ್ದಾನೆ ಎಂಬ ಅರಿವು ಇಲ್ಲ. ಅವರ ಬಗ್ಗೆ ಅನುಕಂಪ ಇರಬೇಕು, ಆದ್ರೆ ಪ್ರತಿಕ್ರಿಯಿಸಬಾರದು. ನನ್ನ ವಿಷಯ ಮಾತನಾಡಿದ್ದಾರೆ, ಯಾವುದೇ ತನಿಖೆಗೂ ಸಿದ್ಧ. ಸಿಎಂಗೆ ಪತ್ರ ನೀಡುವ ಬಗ್ಗೆ ನಾಯಕರು ತೀರ್ಮಾನಿಸುತ್ತಾರೆ. ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಸೂಚಿಸಿದೆಡೆ ಸಹಿ ಹಾಕ್ತೇವೆ’ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಸ್ಟುಪಿಡ್ ಹೇಳಿಕೆ, ಗಿಲ್ಟಿ ಮೈಂಡ್​ನಿಂದ ಸುಧಾಕರ್ ಹಾಗೆ ಹೇಳಿದ್ದಾರೆ: ಸಿದ್ದರಾಮಯ್ಯ ಟಾಂಗ್

ಇದನ್ನೂ ಓದಿ: ವಿವಾದಕ್ಕೀಡಾದ ‘ಏಕಪತ್ನೀವ್ರತಸ್ಥ’ ಹೇಳಿಕೆ; ಸಚಿವ ಡಾ.ಕೆ.ಸುಧಾಕರ್ ವಿಷಾದ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?