ಬಿಎಸ್‌ವೈ ಕೆಳಗಿಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ -ಸಿದ್ದರಾಮಯ್ಯ

|

Updated on: Oct 20, 2020 | 2:14 PM

ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ವಿಚಾರ ಸಂಬಂಧಿಸಿ ಬಿಎಸ್‌ವೈ […]

ಬಿಎಸ್‌ವೈ ಕೆಳಗಿಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ -ಸಿದ್ದರಾಮಯ್ಯ
Follow us on

ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ವಿಚಾರ ಸಂಬಂಧಿಸಿ ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಬಿಎಸ್‌ವೈ ಇಳಿಸುವ ಬಗ್ಗೆ ಚರ್ಚೆ ನಡೆದಿರುವುದು ನಿಜ. ಯಾವಾಗ ಇಳಿಸ್ತಾರೆ, ಯಾರನ್ನ ಸಿಎಂ ಮಾಡ್ತಾರೆ ಗೊತ್ತಿಲ್ಲ ಎಂದಿದ್ದಾರೆ.

ಇನ್ನು ಪ್ರವಾಹ ಪರಿಹಾರ ಕುರಿತು ಮಾತನಾಡಿದ ಅವರು ಪರಿಹಾರಕ್ಕೆ ‌ಕೇಂದ್ರ ಸರ್ಕಾರ ಒಂದು ರೂ. ಕೊಟ್ಟಿಲ್ಲ. ರಾಜ್ಯ ಸರ್ಕಾರ ಕೂಡ ಒಂದು ರೂಪಾಯಿ ಖರ್ಚು ಮಾಡಿಲ್ಲ. ಕರ್ನಾಟಕ‌ ಅಂದ್ರೆ ಪ್ರಧಾನಿ ಮೋದಿಗೆ ಮಲತಾಯಿ ಧೋರಣೆ. ಕಳೆದ ಬಾರಿ ಭೀಕರ ಪ್ರವಾಹವಿತ್ತು, ಆ ಸಮಯದಲ್ಲೇ ಬಂದಿಲ್ಲ. ಈಗ ಮೋದಿ ಬರುತ್ತಾರಾ? ಜನ ಅವರಿಗೆ ಪಾಠ ಕಲಿಸುತ್ತಾರೆ ಎಂದರು.

ಇದನ್ನೂ ಓದಿ: ‘ಬಿಎಸ್‌ವೈ CM ಆಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ’-ಯತ್ನಾಳ್

Published On - 1:47 pm, Tue, 20 October 20