ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ ಎಂದಿದ್ದಾರೆ ಸಿದ್ದರಾಮಯ್ಯ.

  • TV9 Web Team
  • Published On - 18:27 PM, 17 Jan 2021
ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಪ್ರತಿಭಟನೆಗೆ ಸಿದ್ದರಾಮಯ್ಯ ಬೆಂಬಲ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ವಿರುದ್ಧದ ಧರಣಿ 57ನೇ ದಿನಕ್ಕೆ ಕಾಲಿಟ್ಟಿದೆ. ಕೆಲಸ ಕೊಡಿ ಇಲ್ಲವೇ ಭೂಮಿ ವಾಪಸ್‌ ಕೊಡಿ ಎಂದು ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ನಡೆಸುತ್ತಿದ್ದು ಈ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ.

ಭೂಮಿ ಕಳೆದುಕೊಂಡವರಿಗೆ ಕಾರ್ಖಾನೆಯಲ್ಲಿ ಕೆಲಸದ ವಿಚಾರ ಸಂಬಂಧ ಕಾರ್ಮಿಕ ಇಲಾಖೆ ಸಚಿವರು, ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ.ಕಾರ್ಖಾನೆಯ ಆಡಳಿತ ಮಂಡಳಿ ಜತೆಗೂ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥವಾಗಲಿದೆ. ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ವಿಶ್ವಾಸವಿದೆ. ಉದ್ಯೋಗ ಕೊಡದಿದ್ದರೆ ನಾನು ಮಧ್ಯಪ್ರವೇಶ ಮಾಡುತ್ತೇನೆ. ನಿಮ್ಮ ಹೋರಾಟದಲ್ಲಿ ನಾನೂ ಭಾಗಿಯಾಗುವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು