ಸಿದ್ದರಾಮಯ್ಯಗೆ ಕೊರೊನಾ ಪಾಸಿಟಿವ್, ಒಂದೇ ಆಸ್ಪತ್ರೆಯಲ್ಲಿ ಹಾಲಿ ಮತ್ತು ಮಾಜಿ ಸಿಎಂ ಚಿಕಿತ್ಸೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮೂತ್ರಕೋಶ ಸೋಂಕಿನಿಂದ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ರು. ಆದರೆ ಈಗ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಸಿದ್ದರಾಮಯ್ಯ ಅವರಿಗೆ ಯಾವುದೇ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಈ ಬಗ್ಗೆ ಅವರ ಮಗ ಡಾ. ಯತೀಂದ್ರ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ರಾಜ್ಯದ ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, ಹಾಲಿ ಮತ್ತು […]
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮೂತ್ರಕೋಶ ಸೋಂಕಿನಿಂದ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ರು. ಆದರೆ ಈಗ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಸಿದ್ದರಾಮಯ್ಯ ಅವರಿಗೆ ಯಾವುದೇ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಈ ಬಗ್ಗೆ ಅವರ ಮಗ ಡಾ. ಯತೀಂದ್ರ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ರಾಜ್ಯದ ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, ಹಾಲಿ ಮತ್ತು ಮಾಜಿ ಸಿಎಂಗಳು ಒಂದೆ ಕಡೆ ಇದ್ದಾರೆ.
ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ.
— Dr Yathindra Siddaramaiah (@Dr_Yathindra_S) August 4, 2020
Published On - 8:40 am, Tue, 4 August 20