ಸಿದ್ದರಾಮಯ್ಯಗೆ ಕೊರೊನಾ‌ ಪಾಸಿಟಿವ್, ಒಂದೇ ಆಸ್ಪತ್ರೆಯಲ್ಲಿ ಹಾಲಿ ಮತ್ತು ಮಾಜಿ ಸಿಎಂ ಚಿಕಿತ್ಸೆ

|

Updated on: Aug 04, 2020 | 8:47 AM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮೂತ್ರಕೋಶ ಸೋಂಕಿನಿಂದ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ರು. ಆದರೆ ಈಗ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಸಿದ್ದರಾಮಯ್ಯ ಅವರಿಗೆ ಯಾವುದೇ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಈ ಬಗ್ಗೆ ಅವರ ಮಗ ಡಾ. ಯತೀಂದ್ರ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ರಾಜ್ಯದ ಮುಖ್ಯಮಂತ್ರಿ ಬಿಎಸ್​ಯಡಿಯೂರಪ್ಪ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, ಹಾಲಿ ಮತ್ತು […]

ಸಿದ್ದರಾಮಯ್ಯಗೆ ಕೊರೊನಾ‌ ಪಾಸಿಟಿವ್, ಒಂದೇ ಆಸ್ಪತ್ರೆಯಲ್ಲಿ ಹಾಲಿ ಮತ್ತು ಮಾಜಿ ಸಿಎಂ ಚಿಕಿತ್ಸೆ
Follow us on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮೂತ್ರಕೋಶ ಸೋಂಕಿನಿಂದ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ರು. ಆದರೆ ಈಗ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಸಿದ್ದರಾಮಯ್ಯ ಅವರಿಗೆ ಯಾವುದೇ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಈ ಬಗ್ಗೆ ಅವರ ಮಗ ಡಾ. ಯತೀಂದ್ರ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ರಾಜ್ಯದ ಮುಖ್ಯಮಂತ್ರಿ ಬಿಎಸ್​ಯಡಿಯೂರಪ್ಪ ಸಹ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದು, ಹಾಲಿ ಮತ್ತು ಮಾಜಿ ಸಿಎಂಗಳು ಒಂದೆ ಕಡೆ ಇದ್ದಾರೆ.

Published On - 8:40 am, Tue, 4 August 20